ಆಧುನಿಕ ಅನುಭವ ಮಂಟಪ ಕಾಮಗಾರಿ ವರ್ಷದೊಳಗೆ ಪೂರ್ಣ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

Date:

ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೆಂಗಳೂರಿನ ಅರಮನೆ ಆವರಣದಲ್ಲಿಂದು ನಡೆದ ಶ್ರೀಗುರು ಸಿದ್ದರಾಮೇಶ್ವರ್‌ ಅವರ 852ನೇ ಜಯಂತ್ಯುತ್ಸವದಲ್ಲಿ ನೊಳಂಬ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, “ಬಸವಕಲ್ಯಾಣದ ಅನುಭವ ಮಂಟಪ ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಪರಿಕಲ್ಪನೆಯನ್ನು ವಿಶ್ವಕ್ಕೆ ನೀಡಿದ ಕೀರ್ತಿಗೆ ಪಾತ್ರವಾಗಿದೆ” ಎಂದು ತಿಳಿಸಿದರು.

“ಈಗಿರುವ ಅನುಭವ ಮಂಟಪ ನಿರ್ಮಾಣಕ್ಕೆ ಲಿಂಗೈಕ್ಯ ಚನ್ನಬಸವ ಪಟ್ಟದೇವರು ಮತ್ತು ಶತಾಯುಷಿ ಲೋಕನಾಯಕ ಭೀಮಣ್ಣ ಖಂಡ್ರೆ ಅವರ ಕೊಡುಗೆ ಸ್ಮರಿಸಿದ ಈಶ್ವರ ಖಂಡ್ರೆ, ಆಧುನಿಕ ಅನುಭವ ಮಂಟಪದ 770 ಕಂಬಗಳಲ್ಲಿ ಬಸವಾದಿ ಶರಣರುಗಳೆಲ್ಲರ ವಚನಗಳನ್ನು ಕೆತ್ತಿಸಲಾಗುವುದು. ಈ ಮೂಲಕ ಶರಣ ಸಾಹಿತ್ಯ, ವಚನ ಸಾಹಿತ್ಯ ಚಿರಸ್ಥಾಯಿಯಾಗಿ ಉಳಿಯುಂತೆ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುರು ಸಿದ್ಧರಾಮೇಶ್ವರರು ಶರಣ, ವಚನಕಾರರಷ್ಟೇ ಅಲ್ಲ ಅವರು ಸಮಾಜ ಸೇವಕರೂ ಆಗಿದ್ದರೂ, ಕೆರೆಗಳನ್ನು ಕಟ್ಟಿಸಿದ್ದರು. ಅವರ ಬದುಕು ಎಲ್ಲರಿಗೂ ಪ್ರೇರಣೆಯಾಗಬೇಕು. ಸಿದ್ಧರಾಮೇಶ್ವರರ ವಚನಗಳ ಅನುಭಾವ ಓದುಗರ ಜ್ಞಾನಚಕ್ಷುವನ್ನು ತೆರೆಸುತ್ತದೆ. ಅವರು ಸಾವಿರಾರು ವಚನಗಳನ್ನು ರಚಿಸಿದ್ದು, ಅವುಗಳ ಪೈಕಿ ಕೆಲವು ಮಾತ್ರವೇ ಲಭ್ಯವಾಗಿವೆ. ಅವರ ಸಮಗ್ರ ಜೀವನ ಚರಿತ್ರೆಯು ಜಗತ್ತಿಗೆ ತಿಳಿಯಬೇಕು” ಎಂದು ಹೇಳಿದರು.

ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸತ್ ಸದಸ್ಯರಾದ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕರುಗಳಾದ ಬಿ.ವೈ. ವಿಜಯೇಂದ್ರ, ಎಸ್.ಆರ್. ವಿಶ್ವನಾಥ್, ಜ್ಯೋತಿ ಗಣೇಶ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...