ಮೋದಿ ಬದುಕಿರುವುದೇ ಪ್ರಚಾರದಿಂದ, ಅವರ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

Date:

ಮೋದಿ ಅವರ ಸರ್ಕಾರಕ್ಕೆ ‌ನನ್ನಿಂದ ಸೊನ್ನೆ ಅಂಕ. ಪ್ರಧಾನಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು (ಜೂ.9) ಮೈಸೂರಿನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಮೋದಿ ಬದುಕಿರುವುದೇ ಪ್ರಚಾರದಿಂದ. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ? ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ಯಾರಿಗೆ ಸಿಕ್ಕಿದೆ? ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು” ಎಂದು ಪ್ರಶ್ನಿಸಿದರು.

ಸುಳ್ಳು ವಿಚಾರಗಳಿಗೆ ಪ್ರಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ, ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು” ಎಂದು ಕುಟುಕಿದರು.

“ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿದರು. ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ನಿರ್ಮಲಾ ಸೀತಾರಾಮನ್ 5,300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15ನೇ ಹಣಕಾಸು ಆಯೋಗದವರು 11,495 ಕೋಟಿ ರೂ. ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...