ಮತ್ತೆ ಮುಂಗಾರು ಚುರುಕು, ಕರಾವಳಿ ಸೇರಿ ರಾಜ್ಯದ ಹಲವೆಡೆ ವಾರಾಂತ್ಯದವರೆಗೆ ಭಾರೀ ಮಳೆ ಸಾಧ್ಯತೆ

Date:

ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳೂ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಳೆದ ಮೂರು ದಿನಗಳಿಂದ ಕೇವಲ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಷ್ಟೇ ಅಲ್ಲ ಬೆಂಗಳೂರು ಮತ್ತಿತರೆ ಕಡೆಗಳಲ್ಲೂ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕೊಪ್ಪಳ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ,ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ದಿನಗಳಲ್ಲಿ ಧರ್ಮಸ್ಥಳ, ಹೆಸರಘಟ್ಟ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕೋಟಾ, ಕಾರ್ಕಳ, ಬೀದರ್, ಭಾಗಮಂಡಲ, ಆಗುಂಬೆ, ನಾಪೋಕ್ಲು, ಮಾಣಿ, ಮಾಗಡಿ, ಕುಂದಾಪುರ, ಕಿಬ್ಬನಹಳ್ಳಿ, ಕಳಸ, ಗೋಪಾಲ್​​ನಗರ, ಚನ್ನರಾಯಪಟ್ಟಣ, ಭದ್ರಾವತಿ, ಬೆಂಗಳೂರು ಎಚ್​​ಎಎಲ್​, ಉಪ್ಪಿನಂಗಡಿ, ತಿಪಟೂರು, ಸಿದ್ದಾಪುರ, ಮಂಕಿ, ಪೊನ್ನಂಪೇಟೆ, ಕುಣಿಗಲ್, ಕೊಟ್ಟಿಗೆಹಾರ, ಕ್ಯಾಸಲ್​ರಾಕ್ ರಾಯಲ್ಪಾಡು, ಗೌರಿಬಿದನೂರು, ಹೊಸಕೋಟೆ, ಗೇರುಸೊಪ್ಪ, ಶಿರಾಲಿ, ಶೃಂಗೇರಿ, ಕುಮಟಾ, ಕೃಷ್ಣರಾಜಪೇಟೆ, ಕಮ್ಮರಡಿ, ಹಾವೇರಿ, ಬೇಳೂರು, ಬನವಾಸಿ, ಹೊನ್ನಾವರ, ಗೋಕರ್ಣ, ಹಾಗೂ ಭಾಗಮಂಡಲದಲ್ಲಿ ಮಳೆಯಾಗಿದೆ. ಈ ವಾರದ ವೀಕೆಂಡ್ ಬಳಿಕ ಮಳೆ ಪ್ರಮಾಣ ಕುಸಿಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮಳೆ ಮತ್ತೆ ಮರುಪ್ರವೇಶಿಸಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಉತ್ತಮ ಮಳೆ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸೋಮವಾರದ ಬಳಿಕ ಸಾಧಾರಣ ಮಳೆ ಕಾಣಿಸಿಕೊಂಡರೆ ಮಂಗಳವಾರವಂತೂ ಜಿಲ್ಲೆಯ ನಾನಾ ಭಾಗದಲ್ಲಿಉತ್ತಮ ಮಳೆ ದಾಖಲಾಗಿದೆ. ವಿಶೇಷವಾಗಿ ಮಂಗಳೂರು ನಗರ ಭಾಗದಲ್ಲಿಸಂಜೆ ಹೊತ್ತು ಮಳೆ ಕಾಣಿಸಿಕೊಂಡರೆ ಉಳಿದಂತೆ ಗ್ರಾಮಾಂತರ ಭಾಗವಾದ ಕಡಬ, ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಉತ್ತಮ ಮಳೆ ದಾಖಲಾಗಿದೆ

ಬೆಂಗಳೂರಿನಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಎಚ್​​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...