ಮುಂಗಾರಿನ ಆರ್ಭಟ; ಲಕ್ಷಾಂತರ ಮೌಲ್ಯದ ಬೆಳೆ ನಾಶ, ರೈತರು ಕಂಗಾಲು

Date:

ಕಳೆದ ಕೆಲ ದಿನಗಳಿಂದ ಮುಂದುವರೆದ ಮುಂಗಾರಿನ ಅಬ್ಬರಕ್ಕೆ ರಾಜ್ಯದ ರೈತರು ತತ್ತರಿಸಿದ್ದಾರೆ. ಬೆಳೆದ ಭತ್ತ, ಜೋಳ, ರಾಗಿ, ಹತ್ತಿ, ಬಾಳೆ, ತಂಬಾಕು ಸೇರಿದಂತೆ ಹಲವು ಪ್ರಮುಖ ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿಕೊಂಡು ಈಗಾಗಲೇ ಸಂಕಷ್ಟದಲ್ಲಿರುವ ಕೃಷಿ ವಲಯ ಈಗ ಮಳೆಯಿಂದ ಮತ್ತೆ ಕಂಗೆಟ್ಟಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಮಲನಗರ ತಾಲೂಕಿನ ಬಾಲೂರು ಗ್ರಾಮದಲ್ಲಿ ಕೃಷಿ ಜಮೀನುಗಳು ಜಲಾವೃತಗೊಂಡಿವೆ. ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗಿದೆ.

ಶೇಂಗಾ, ಬೆಂಡೆಕಾಯಿ, ಬದನೆಕಾಯ, ಕಬ್ಬು ಸೇರಿದಂತೆ ಹಲವು ಬೆಳೆಗಳು ನಾಶವಾಗಿದೆ. ಜಮೀನಿನಲ್ಲಿ 2 ರಿಂದ 3 ಅಡಿ ನೀರು ನಿಂತಿದ್ದು, ಶೇಂಗಾ ಬಹುತೇಕ ಕೊಳೆತು ಹೋಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ಬೆಳೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 4 3

ಅದೇ ಪಟ್ಟಣದ ಇಂದ್ರಾನಗರ ಕಾಲೋನಿಯ ಹಲವು ಮನೆಗಳಿಗೆ ನೀರು ನುಗ್ಗಿರುವ ಪರಿಣಾಮ ಮನೆಯಲ್ಲಿದ್ದ ಅಕ್ಕಿ, ಈರುಳ್ಳಿ ಸೇರಿದಂತೆ ಧವಸ ದಾನ್ಯಗಳು ನೀರು ಪಾಲಾಗಿದೆ. ಮನೆಯಂಗಳಗಳು ಕೆರೆಯಾಗಿ ಮಾರ್ಪಟ್ಟಿವೆ.

ಚಿಕ್ಕಬಳ್ಳಾಪುರದಲ್ಲೂ ಮಳೆ ತನ್ನ ಅವಾಂತರ ಮುಂದುವರೆಸಿದೆ. ಸಾಲ ಮಾಡಿ ಒಂದುವರೆ ಎಕರೆಯಲ್ಲಿ ದಾಳಿಂಬೆ ಬೆಳೆದು, ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದ ರೈತ ಕ್ಯಾತಪ್ಪ ಆತಂಕ ಎದುರಿಸುತ್ತಿದ್ದಾರೆ. ಕಳೆದ ವಾರ ಸುರಿದ ಗಾಳಿ ಮಳೆಗೆ ದಾಳಿಂಬೆ ಗಿಡಗಳಲ್ಲಿದ್ದ ಹೂಗಳೆಲ್ಲವೂ ನೆಲಕ್ಕೆ ಉದುರಿ ಮಣ್ಣು ಪಾಲಾಗಿವೆ. ಕಳೆದ ವರ್ಷ 12 ಟನ್ ಇಳುವರಿ ಬಂದಿತ್ತು. ಈ ಬಾರಿಯೂ 12 ರಿಂದ 13 ಟನ್ ಇಳುವರಿ ಬರಲಿದೆ. ಒಳ್ಳೆಯ ರೇಟ್ ಸಿಕ್ರೆ ಲಕ್ಷಾಂತರ ರೂಪಾಯಿ ಆದಾಯವೂ ಬರಲಿದೆ ಎಂದು ಸಂತಸದಲ್ಲಿದ್ದರು ರೈತ ಕ್ಯಾತಪ್ಪ. ಆದರೆ ಒಂದು ಗಾಳಿ ಸಹಿತ ಮಳೆ ಅವರ ಆಸೆಗಳನ್ನೆಲ್ಲಾ ಕಮರಿಸಿದೆ. ದಾಳಿಂಬೆ ಗಿಡಗಳಲ್ಲಿದ್ದ ಹೂಗಳೆಲ್ಲವೂ ಮಣ್ಣು ಪಾಲಾಗಿ ಈಗ ಕೇವಲ 3-4 ಟನ್ ಮಾತ್ರ ಇಳುವರಿ ಬಂದರೆ ಹೆಚ್ಚು ಎಂದು ರೈತ ನೋವು ವ್ಯಕ್ತಪಡಿಸಿದ್ದಾರೆ.

WhatsApp Image 2025 05 31 at 12.49.15 PM

ಮೈಸೂರಿನ ಹುಣಸೂರು ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕೊಳವಿಗೆಯ ರೈತ ನಾಗೇಶ್‌ ಅವರ ತಂಬಾಕು ಬೆಳೆ ನಾಶವಾಗಿದೆ. ತಗ್ಗು ಪ್ರದೇಶದ ಹೊಲದಲ್ಲಿ ನೀರು ನಿಂತು ಬೆಳೆ ಕೊಳೆಯುತ್ತಿದೆ. ಕಟಾವಿಗೆ ಬಂದ ತಂಬಾಕು ಹಳದಿ ಬಣ್ಣಕ್ಕೆ ತಿರುಗಿದೆ. ಇದರಿಂದ ಬೆಳೆ ನಷ್ಟದ ಭೀತಿಯಲ್ಲಿದ್ದಾರೆ ರೈತ ನಾಗೇಶ್.‌

ಎಕರೆಕೆ 1 ಲಕ್ಷ ಖರ್ಚು ಮಾಡಿ 5 ಎಕರೆಯಲ್ಲಿ ತಂಬಾಕು ಬೆಳೆದಿದ್ದೆ. ಈ ಬಾರಿ ಅವಧಿಗಿಂತ ಮೊದಲೇ ಮುಂಗಾರು ಆರಂಭವಾಗಿ ಬೆಳೆಯೆಲ್ಲಾ ನೀರುಪಾಲಾಗಿದೆ. ವಾಣಿಜ್ಯ ಬೆಳೆಯಾಗಿರುವುದರಿಂದ ವಿಮೆಯೂ ಇಲ್ಲ.  ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಕಂಗಾಲಾಗಿದ್ದಾರೆ ನಾಗೇಶ್.‌

WhatsApp Image 2025 05 31 at 1.47.12 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...