ಗ್ಯಾರಂಟಿ ರದ್ದತಿಗಾಗಿ ಸದನದಲ್ಲಿ ನಿರ್ಣಯ ಮಂಡಿಸಿ: ಬಿಜೆಪಿಗೆ ಡಿಕೆಶಿ ಸವಾಲು

Date:

“ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಬೇಕು ಅಥವಾ ಮರುಪರಿಶೀಲಿಸಬೇಕು ಎಂಬುದು ನಿಮ್ಮ ಪಕ್ಷದ ನಿಲುವಾಗಿದ್ದರೆ, ಧೈರ್ಯವಾಗಿ ಸದನದಲ್ಲಿ ಅಧಿಕೃತ ನಿರ್ಣಯ ಮಂಡಿಸಿ. ಆನಂತರ ಜನರ ಮುಂದೆ ಇದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸೋಣ” ಎಂದು ಬಿಜೆಪಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಗ್ಯಾರಂಟಿ ಯೋಜನೆಗಳ ರದ್ದತಿಗೆ ಆಗ್ರಹಿಸಿದಾಗ, ಡಿ.ಕೆ. ಶಿವಕುಮಾರ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.”ಸುರೇಶ್ ಗೌಡ ಅವರೇ, ನೀವು ಹಿರಿಯ ನಾಯಕರು. ನಿಮ್ಮ ಪಕ್ಕದಲ್ಲೇ ಮಾಜಿ ಉಪಮುಖ್ಯಮಂತ್ರಿಗಳಿದ್ದಾರೆ. ಗ್ಯಾರಂಟಿ ರದ್ದುಗೊಳಿಸುವ ಬಗ್ಗೆ ನೀವು ಆಡುತ್ತಿರುವ ಮಾತುಗಳು ಕೇವಲ ನಿಮ್ಮ ವೈಯಕ್ತಿಕ ಅಭಿಪ್ರಾಯವಲ್ಲ. ಅದು ನಿಮ್ಮ ಪಕ್ಷದ ನಿಲುವು ಎಂದೇ ಭಾವಿಸುತ್ತೇನೆ. ಈ ಬಜೆಟ್ ಅಧಿವೇಶನ ಮುಗಿಯುವ ಒಳಗೇ ನಿಮ್ಮ ಪಕ್ಷದ ಅಧಿಕೃತ ತೀರ್ಮಾನವನ್ನು ಸದನಕ್ಕೆ ತಿಳಿಸಿ, ನಾವು ಅದರ ಬಗ್ಗೆ ಚಿಂತನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

“ಯಡಿಯೂರಪ್ಪ ಅವರು ಈ ಹಿಂದೆ ‘ಒಂದು ಕಾಳು ಅಕ್ಕಿ ಕಡಿಮೆಯಾದರೂ ಬಿಡುವುದಿಲ್ಲ’ ಎಂದು ಎಚ್ಚರಿಸಿದ್ದರು. ಅಕ್ಕಿ ವಿತರಣೆ ಬಗ್ಗೆ ನೀವೇ ಟೀಕೆ ಮಾಡಿದ್ದೀರಿ. ನಿಮ್ಮ ಸವಾಲುಗಳನ್ನು ಸ್ವೀಕರಿಸಿಯೇ ನಾವು ಆರು ತಿಂಗಳೊಳಗೆ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ನಿಮ್ಮ ಮಾತನ್ನು ಕೇಳಿಯೇ ನಾವು ಈ ಯೋಜನೆಗಳನ್ನು ನೀಡಿದ್ದೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ಅಸ್ಸಾಂ ಪ್ರವಾಸವನ್ನು ಪ್ರಸ್ತಾಪಿಸಿದ ಶಿವಕುಮಾರ್, “ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಯೋಜನೆಗಳನ್ನು ನೀಡಲಾಗುತ್ತಿದೆ. ಆದರೆ, ನಮ್ಮದು ಸರ್ವರಿಗೂ ಸಮಬಾಳು. ನೀವು ಬೇಕಿದ್ದರೆ ‘ಚಾಟ್ ಜಿಪಿಟಿ’ಯಲ್ಲಿ ಗುಜರಾತ್ ಚುನಾವಣೆ ಗೆಲ್ಲುವುದು ಹೇಗೆ ಎಂದು ಹುಡುಕಿ ನೋಡಿ, ಅಲ್ಲಿಯೂ ಕರ್ನಾಟಕದ ಗ್ಯಾರಂಟಿ ಮಾದರಿಯನ್ನೇ ಅನುಸರಿಸಲು ಸಲಹೆ ಸಿಗುತ್ತದೆ. ಶ್ರೀಮಂತರಿಗೆ ಈ ಯೋಜನೆಗಳು ಬೇಕಿಲ್ಲದಿರಬಹುದು. ಆದರೆ ಬಡವರಿಗೆ ಇದು ಆಸರೆ” ಎಂದು ಪ್ರತಿಪಾಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...