ಸಂಸದ ತೇಜಸ್ವಿ ಸೂರ್ಯ ಎಳಸು ಹುಡುಗ, ಅವನೊಬ್ಬ ನಿರುಪಯುಕ್ತ: ಡಿ ಕೆ ಶಿವಕುಮಾರ್

Date:

ಸಂಸದ ತೇಜಸ್ವಿ ಸೂರ್ಯ ಇನ್ನೂ ಎಳಸು ಹುಡುಗ. ಆತನಿಗೆ ಇನ್ನು ಅನುಭವದ ಕೊರತೆ ಇದೆ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಕಿಡಿಕಾರಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯೆ ನೀಡಿ, “ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು? ಈ ದೇಶದಲ್ಲಿ, ಪ್ರಪಂಚದಲ್ಲಿಯೇ ಟನಲ್ ರಸ್ತೆಗಳೇ ಬೇಡ ಎಂದು ಅವನು ಕೇಂದ್ರ ಸಚಿವನಾದ ಮೇಲೆ ಲೋಕಸಭೆಯಲ್ಲಿ ತೀರ್ಮಾನ ಮಾಡಲಿ” ಎಂದರು.

ಟನಲ್ ರಸ್ತೆ ಯೋಜನೆಯನ್ನು ತಂತ್ರಜ್ಞರ ಅಭಿಪ್ರಾಯ ಪಡೆದು ಮಾಡಬೇಕಿತ್ತು ಎನ್ನುವ ಹೇಳಿಕೆಯ ಬಗ್ಗೆ ಕೇಳಿದಾಗ ಉತ್ತರಿಸಿದ ಡಿಸಿಎಂ ಅವರು, “ಏನೋ ಹೋಗಲಿ ಅಂತ ಗೌರವ ಕೊಟ್ಟು ನನ್ನ ಜೊತೆ ಮಾತನಾಡಲು ಅವಕಾಶ ನೀಡಿದರೆ ಏನೇನೋ ಮಾತನಾಡುತ್ತಿದ್ದಾನೆ. ಆದರೆ ನಾನು ಆತನ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಂಸದ ತೇಜಸ್ವಿ ಸೂರ್ಯನಿಗೆ ಪ್ರಪಂಚ ಹೇಗಿದೆ ಎಂದೇ ಗೊತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ?

“ನಾನು ಹುಡುಗನ ಬಳಿ ಕಾರಿಲ್ಲದಿದ್ದರೆ ಹೆಣ್ಣು ನೀಡುವುದಿಲ್ಲ ಎಂದಿದ್ದೆ. ಅದನ್ನೇ ಹಿಡಿದುಕೊಂಡು ಮಾತಾಡುತ್ತಿದ್ದಾನೆ. ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ‌ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು? ಇವರಿಗೆ ಕಾರುಗಳು ಏಕೆ ಬೇಕು? ಬೆಂಗಳೂರಿನಲ್ಲಿ 1.30 ಕೋಟಿಗೂ ಹೆಚ್ಚು ವಾಹನಗಳಿವೆ ಎಂಬುದನ್ನು ಆತ ಅರ್ಥ ಮಾಡಿಕೊಳ್ಳಬೇಕು, ಅವರಿಗೆಲ್ಲ ವಾಹನ ಬಳಸಬೇಡಿ ಎಂದು ಹೇಳಲು ಆಗುತ್ತದೆಯೇ” ಎಂದು ತಿವಿದರು.

ಮದುವೆ ಮಾಡಿಸಲು ಈ ಯೋಜನೆ ಕೈಗೆತ್ತಿಕೊಂಡಿದ್ದಾರೆ ಎನ್ನುವ ಟೀಕೆಯ ಬಗ್ಗೆ ಕೇಳಿದಾಗ, “ಅದಕ್ಕೆ ನಾನು ಆತನನ್ನು ಎಳಸು ಎಂದು ಕರೆದಿದ್ದು. ನೀವೆಲ್ಲರೂ ಕ್ಯಾಮೆರಾ ಹಿಡಿದುಕೊಂಡು (ಮಾಧ್ಯಮದವರು) ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಿಕೊಂಡು ಕೆಲಸ ಮಾಡಲು ಆಗುತ್ತದೆಯೇ? ಶಾಲಾ ಮಕ್ಕಳನ್ನು ಶಾಲಾ ವಾಹನದಲ್ಲಿ ಕಳುಹಿಸುತ್ತಾರೆ. ಅವರಿಗೆ ಸಾರ್ವಜನಿಕ ಸಾರಿಗೆಯಲ್ಲಿ‌ ಕಳುಹಿಸಿ ಎಂದು ಹೇಳಲು ಆಗುತ್ತದೆಯೇ?” ಎಂದರು.

“ಈ ರಾಜ್ಯಕ್ಕೆ ಮೆಟ್ರೋ ತಂದವರು ನಾವು. ಅವರಿಗೆ ಅಧಿಕಾರ ಇದ್ದಾಗ ಏನು ಮಾಡಿದ್ದಾರೆ? ಕೇಂದ್ರದಿಂದ ಏನು ತೆಗೆದುಕೊಂಡು ಬಂದಿದ್ದಾರೆ? ಬೆಂಗಳೂರಲ್ಲಿ ಎಷ್ಟು ಪಿಲ್ಲರ್ ಹಾಕಿದ್ದಾರೆ? ಯೋಜನೆಗೆ ಹಣವೆಷ್ಟು ತಂದಿದ್ದಾರೆ? ಕೇಂದ್ರ ಸರ್ಕಾರ ಮೆಟ್ರೋ ಯೋಜನೆಗೆ ಶೇ. 11-12 ರಷ್ಟು ಹಣ ನೀಡುತ್ತಿದೆ. ಭೂ ಪರಿಹಾರ ಸೇರಿದಂತೆ ಎಲ್ಲವನ್ನೂ ನಾವೇ ನೀಡುತ್ತಿದ್ದೇವೆ” ಎಂದು ಹೇಳಿದರು.

ಹೀ ಇಸ್ ವೇಸ್ಟ್ ಮೆಟಿರಿಯಲ್

“ಅವನ ಬಗ್ಗೆ ನನ್ನ ಬಳಿ ಯಾವ ಪ್ರಶ್ನೆಯನ್ನೂ ಕೇಳಬೇಡಿ. ಹೋಲಿಕೆ ಮಾಡಬೇಡಿ. ಹೀ ಇಸ್ ಎ ವೇಸ್ಟ್ ಮೆಟಿರಿಯಲ್, ಖಾಲಿ ಟ್ರಂಕ್ ಆತ. ಅವರ ಪಕ್ಷದ ಹಿರಿಯ ನಾಯಕರಾದ ಅಶೋಕ್, ಅಶ್ವತ್ಥ ನಾರಾಯಣ್, ಬಸವರಾಜ ಬೊಮ್ಮಾಯಿ,‌ ಜಗದೀಶ್‌ ಶೆಟ್ಟರ್ ಅಂತಹವರು ಮಾತನಾಡಿದರೆ ಉತ್ತರ ನೀಡೋಣ. ಏಕೆಂದರೆ ‌ಅವರಿಗೆ ಇದೆಲ್ಲವೂ ಅರ್ಥವಾಗುತ್ತದೆ. ಬೆಂಗಳೂರಿನಲ್ಲಿ ಬಿಆರ್ ಟಿಎಸ್ ಮಾಡಲು ಎಲ್ಲಿ ಜಾಗವಿದೆ? ಭೂ ಪರಿಹಾರ ಎಷ್ಟಾಗುತ್ತದೆ ಎನ್ನುವ ಅರಿವು ತೇಜಸ್ವಿ ಸೂರ್ಯನಿಗೆ ತಲೆಯಲ್ಲಿಯೇ ಇಲ್ಲ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...