India AI Impact Buildathon 2026: ಅಗ್ರ ಐದರಲ್ಲಿ ರಾಮಯ್ಯ ಕಾಲೇಜು; ಸ್ಪರ್ಧೆಯಲ್ಲಿ ಗೆದ್ದ ರಾಜ್ಯದ ಏಕೈಕ ತಂಡ

Date:

ಲೈನ್‌ಲೆನ್ಸ್‌ 2026ರ OpenAI Academy × NxtWave × AI Impact Summit National Generative AI Buildathonನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಎಂಎಸ್ ರಾಮಯ್ಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ತಂಡವು ಅಗ್ರ ಐದರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ನಾಲ್ಕನೇ ಸ್ಥಾನ ಪಡೆದುಕೊಂಡ ನಮ್ಮ ತಂಡವು ಸ್ಪರ್ಧೆಯಲ್ಲಿ ಗೆದ್ದ ಕರ್ನಾಟಕದ ಏಕೈಕ ತಂಡವಾಗಿದೆ ಮತ್ತು ಈ ಆವೃತ್ತಿಯಲ್ಲಿ ರಾಷ್ಟ್ರೀಯಮಟ್ಟದಲ್ಲಿ ಟಾಪ್‌ 5ಕ್ಕೆ ತಲುಪಿದ ರಾಜ್ಯದ ಮೊದಲ ತಂಡವಾಗಿದ್ದೇವೆ. ತಂಡಕ್ಕೆ 50,000 ರೂ.ಗಳನ್ನು ಬಹುಮಾನ ಲಭಿಸಿದೆ.

ಮೊದಲ ಸ್ಥಾನವನ್ನು ಮಹಾರಾಷ್ಟ್ರದ ಪಿಳ್ಳೈ ಎಚ್‌ಒಸಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಪಡೆದಿದೆ. ತಮಿಳುನಾಡಿನ ಎನ್‌ಐಎಟಿ ಎರಡನೇ ಸ್ಥಾನ, ತೆಲಂಗಾಣದ ಬಿವಿ ರಾಜು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮೂರನೇ ಸ್ಥಾನ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸ್ವರಗಳೊಂದಿಗೆ ಸ್ಪರ್ಧೆಗಿಳಿದ AI; ಭಾವಕ್ಕೆ ಬರುವುದೇ ಜೀವ?

ಸ್ಪರ್ಧೆಗೆ ದೇಶದಾದ್ಯಂತ 95,000ಕ್ಕೂ ಅಧಿಕ ನೋಂದಣಿ ನಡೆದಿದ್ದು, ಎಂಎಸ್ ರಾಮಯ್ಯ ಕಾಲೇಜು ವಿದ್ಯಾರ್ಥಿಗಳು ಪ್ರಾದೇಶಿಕ ಸುತ್ತುಗಳನ್ನು ದಾಟಿ, ಫೆಬ್ರವರಿ 16–17ರಂದು ದೆಹಲಿಯಲ್ಲಿ ನಡೆದ AI Impact Summit 2026ರ ರಾಷ್ಟ್ರೀಯ ಗ್ರ್ಯಾಂಡ್ ಫಿನಾಲೆಯಲ್ಲಿ ಪ್ರಸ್ತುತಿಯನ್ನು ಪ್ರದರ್ಶಿಸಿದ್ದಾರೆ.

ಗ್ರ್ಯಾಂಡ್ ಫಿನಾಲೆಯಲ್ಲಿ ಫ್ಯೂಚರೆನ್ಸ್ ಟೆಕ್ನಾಲಜೀಸ್‌ನ ಸಹ-ಸಂಸ್ಥಾಪಕ ಮತ್ತು ಸಿಇಒ ರಾಘವ್ ಗುಪ್ತಾ, ದೊಡ್ಡ ಮಟ್ಟದ AI ಮಾದರಿಗಳನ್ನು ತಯಾರಿಸುವಲ್ಲಿ ಪ್ರಸಿದ್ಧರಾದ ಸಂದೀಪ್ ನಾಯರ್, ಜೆಪಿ ಮಾರ್ಗನ್ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಸನ್ನಿ ಮೊಂಗಿಯಾ, ಮೇಕ್‌ಮೈ ಟ್ರಿಪ್ ಇಂಜಿನಿಯರಿಂಗ್ ವಿಭಾಗದ ಉಪಾಧ್ಯಕ್ಷರ ಅಮ್ಲೇಶ್ ಸಿನ್ಹಾ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (AICTE) ಮುಖ್ಯ ಸಮನ್ವಯ ಅಧಿಕಾರಿ ಡಾ. ಚಂದ್ರಶೇಖರ್ ಬುದ್ಧ, ಚಿರಾಟೆ ವೆಂಚರ್ಸ್ ಸಂಸ್ಥೆಯಲ್ಲಿ ಹೂಡಿಕೆ ವಿಭಾಗದ ಉಪಾಧ್ಯಕ್ಷರಾದ ಸಹರ್ಷ್ ಶರ್ಮಾ ಈ ಸ್ಪರ್ಧೆಯ ತೀರ್ಪುಗಾರರು ಆಗಿದ್ದರು.

ರಾಮಯ್ಯ ಕಾಲೇಜಿನ ತಂಡವು ಲೈವ್ ಪಿಚ್ ವೇಳೆ, LineLens ಬಹು-ಟ್ಯಾಬ್ ವರ್ಕ್‌ಫ್ಲೋ ಫ್ರಾಗ್ಮೆಂಟೇಶನ್ ಸಮಸ್ಯೆಯನ್ನು ಹೇಗೆ ಪರಿಹರಿಸುತ್ತದೆ ಎಂಬುದನ್ನು ವಿವರಿಸಿದರು. Cross-tab memory ಮತ್ತು ಒಳಗೊಂಡ AI CRM ಮೂಲಕ ಸಂಬಂಧಗಳನ್ನು ಸ್ವಯಂಚಾಲಿತವಾಗಿ ದಾಖಲಿಸಿ, ಸಹಕಾರದ ನಿರಂತರತೆಯನ್ನು ಕಾಯ್ದುಕೊಳ್ಳುವ ವಿಧಾನ ಪ್ರಸ್ತುತ ಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...