ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

Date:

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಸೆಪ್ಟೆಂಬರ್ 12ರಂದು ವಿಚಾರಣೆಯನ್ನು ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.

ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ವಾದ ಮಂಡಿಸಿದ್ದಾರೆ. “ಲೋಕಾಯುಕ್ತರಿಗೆ ದೂರು ನೀಡಿದ ಬಳಿಕ ನಿರ್ದಿಷ್ಟ ಕಾಲದವರಗೆ ದೂರುದಾರರು ಕಾಯ್ದಿಲ್ಲ. ಆದರೆ, ತಕ್ಷಣ ಅವರು ಭ್ರಷ್ಟಾಚಾರ ನಿರೋಧಕ ಕಾಯಿದೆ ಸೆಕ್ಷನ್‌ 17ಎ ಅಡಿ ರಾಜ್ಯಪಾಲರಿಂದ ಪೂರ್ವಾನುಮತಿ ಕೋರಿದ್ದಾರೆ” ಎಂದು ಹೇಳಿದ್ದಾರೆ.

ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ವಕೀಲೆ ಲಕ್ಷ್ಮಿ ಐಯ್ಯಂಗಾರ್ ವಾದ ಮಂಡಿಸಿದ್ದಾರೆ. ಅರ್ಜಿದಾರರ ಸೂಚನೆಯಂತೆ ಇಡೀ ಪ್ರಕ್ರಿಯೆ ನಡೆದಿದೆ ಎಂದು ಸಿಎಂ ಅಧಿಕಾರವಧಿಯ ಇಸವಿಗಳನ್ನು ಉಲ್ಲೇಖಿಸಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಿಎಂ ಸ್ಥಾನಕ್ಕೆ ಚ್ಯುತಿ ಬಂದಿಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ: ಡಿ ಕೆ ಸುರೇಶ್ ಸ್ಪಷ್ಟನೆ

ಏನೇ ಇದ್ದರೂ ಸೆಪ್ಟೆಂಬರ್ 12ರಂದೇ ವಾದ ಮಂಡಿಸಿ ಕೊನೆಗೊಳಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ. ಅಂದೇ ನ್ಯಾಯಮೂರ್ತಿ ತೀರ್ಪು ನೀಡುವ ಸಾಧ್ಯತೆಯಿದೆ. ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆ ನಡೆಯಲಿದೆ.

ಪ್ರತಿವಾದಿಗಳ ವಾದ ಪೂರ್ಣಗೊಂಡಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಮತ್ತು ಪ್ರೊ. ರವಿವರ್ಮ ಕುಮಾರ್‌ ಅವರು ಸೆಪ್ಟೆಂಬರ್‌ 12ರಂದು ವಾದಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...