ಮುಡಾ ಪ್ರಕರಣ | ಏಕಸದಸ್ಯ ಅಥವಾ ಬೇರೆ ಪೀಠದ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲಾಗದು: ಹೈಕೋರ್ಟ್

Date:

ಮುಡಾ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿಗಳನ್ನು ಕರ್ನಾಟಕ ಹೈಕೋರ್ಟ್‌ ಇಂದು ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ಏಕಸದಸ್ಯ ಅಥವಾ ಬೇರೆ ಪೀಠದ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲಾಗದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಪ್ರಶ್ನಿಸಿ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ ಜೆ ದೇವರಾಜು ಪರ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್‌ ದವೆ, “80 ವರ್ಷದ ಜೆ ದೇವರಾಜು ಅವರು ರಾಜಕೀಯ ದಾಳಿಯಲ್ಲಿ ಸಿಲುಕಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಕೋರಲಾಗಿದೆ. ಈ ವಿಚಾರ ಏಕಸದಸ್ಯ ಪೀಠದ ಮುಂದಿದೆ. ಹೀಗಾಗಿ, ಅಲ್ಲಿ ಜೆ ದೇವರಾಜು ಅವರಿಗೆ ರಕ್ಷಣೆ ನೀಡಬೇಕಿದೆ” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸರ್ಕಾರಿ ಸಂಸ್ಥೆಗಳಿಂದ ಮಾತ್ರ ಬೀಜ ಖರೀದಿಸಿ: ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌

“ಜೆ ದೇವರಾಜು ಅವರು 2004ರಲ್ಲಿ ಭೂಮಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನನಿಗೆ ಮಾರಾಟ ಮಾಡಿದ್ದಾರೆ. ದೇವರಾಜು ಅವರ ವಾದ ಆಲಿಸದೆಯೇ ತನಿಖೆಗೆ ಆದೇಶಿಸಲಾಗಿದೆ. ವಾದ ಆಲಿಸದೆಯೇ ತನಿಖೆಗೆ ಹೇಗೆ ಆದೇಶಿಸಲಾಗುತ್ತದೆ? ಈ ಸಂಬಂಧ ಹಲವು ಸುಪ್ರೀಂ ಕೋರ್ಟ್‌ ಆದೇಶಗಳಿವೆ” ಎಂದು ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೈಕೋರ್ಟ್ ಪೀಠವು, “ನಾವು ಏಕಸದಸ್ಯ ಪೀಠ ಅಥವಾ ಬೇರೊಂದು ಪೀಠದಲ್ಲಿನ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲಾಗದು” ಎಂದು ತಿಳಿಸಿದೆ. “ನಮಗೆ ರಕ್ಷಣೆ ಒದಗಿಸಬೇಕು. ನಾವು ಮಧ್ಯಪ್ರವೇಶ ಮಾಡಬೇಕು ಎಂದು ಕೇಳುತ್ತಿಲ್ಲ” ಎಂದು ದೇವರಾಜು ಪರ ವಕೀಲರು ತಿಳಿಸಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠವು ಮೂರು ಮೇಲ್ಮನವಿಗಳಲ್ಲಿನ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ಹಾಗೆಯೇ ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...