ಮುಡಾ ನಿವೇಶನಗಳ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಮುಡಾ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇ.ಡಿ ಪಡೆದುಕೊಂಡಿತ್ತು. ಈ ಬೆಳವಣಿಗೆಯ ನಂತರ ಈ ದಾಳಿ ನಡೆದಿದೆ. ಬೆಂಗಳೂರಿನ ಸ್ಯಾಂಕಿ ರಸ್ತೆ ಮತ್ತು ಜೆಪಿ ನಗರದಲ್ಲಿ ದಾಳಿ ನಡೆದು ಪರಿಶೀಲನೆ ನಡೆಯುತ್ತಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ
ಇ.ಡಿ ಅಧಿಕಾರಿಗಳು ಅಕ್ಟೋಬರ್ 18 ರಂದು ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಇ.ಡಿ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇ.ಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.
ಇ.ಡಿ ಅಧಿಕಾರಿಗಳು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಆರ್ಟಿಐ ಕಾರ್ಯಕರ್ತ ಗಂಗರಾಜು ಇಂದು (ಅ.28) ಬೆಂಗಳೂರು ಇ.ಡಿ ಕಚೇರಿಗೆ ತೆರಳಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ.





