ಮುಡಾ ಹಗರಣ | ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ ವಿರುದ್ಧದ ಇ.ಡಿ ಸಮನ್ಸ್‌ ರದ್ದುಗೊಳಿಸಿದ ಹೈಕೋರ್ಟ್

Date:

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಇ.ಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್​ಗೆ ಇ.ಡಿ ಸಮನ್ಸ್​ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್​ ಮೊರೆ ಹೋಗಿದ್ದು, ಇಂದು (ಮಾರ್ಚ್​ 07) ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇ.ಡಿ ಸಮನ್ಸ್​ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಸಹಿತ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನಿರಾಳಾಗಿದ್ದಾರೆ.

ಮುಡಾ ಹಗರಣ ಪ್ರಕರಣದಲ್ಲಿ ಇ.ಡಿ ಪ್ರವೇಶಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿ.ಎಂ ಸಿದ್ದರಾಮ್ಯಯನವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ ಸೇರಿದಂತೆ ಇತರರಿಗೆ ಇ.ಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ಅವರು ಇಬ್ಬರು ಪ್ರತ್ಯೇಕವಾಗಿ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, ಇಡಿ ಸಮನ್ಸ್​ಗೆ ತಡೆಯಾಜ್ಞೆ ನೀಡಿತ್ತು. ಇದೀಗ ಕೋರ್ಟ್​ ಇಡಿ ಸಮನ್ಸ್​ ಅನ್ನು ರದ್ದು ಮಾಡಿ ಆದೇಶಿಸಿದೆ. ಇದರಿಂದ ಇಬ್ಬರು ಇಡಿ ವಿಚಾರಣೆಯಿಂದ ಪಾರಾಗಿದ್ದು, ಸಿಎಂ ಸಿದ್ದರಾಮಯ್ಯ ನಿರಾಳರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕೆಡಿಸಿದ್ದಾಯಿತು, ಸರಿಪಡಿಸುವವರಾರು?

ಪಾರ್ವತಿ ಅವರು ಅಕ್ಟೋಬರ್ 1, 2024 ರಂದು ವಿವಾದಿತ ನಿವೇಶನಗಳನ್ನು ಹಿಂದಿರುಗಿಸಿದ್ದರು. ಮುಡಾದ 14 ನಿವೇಶನಗಳಲ್ಲದೆ 1708 ನಿವೇಶನಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ. ಈಗಾಗಲೇ 160 ನಿವೇಶನಗಳನ್ನು ಇ.ಡಿ ತಾತ್ಕಾಲಿಕ ಜಪ್ತಿ ಮಾಡಿದೆ. ತನ್ನ ಕಾರ್ಯವ್ಯಾಪ್ತಿ ಮೀರಿ ಇ.ಡಿ ಪರ್ಯಾಯ ತನಿಖೆ ನಡೆಸುತ್ತಿದೆ. ಇ.ಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಹಲವು ಅಂಶಗಳನ್ನು ಪ್ರಸ್ತಾಪಿಸಿದೆ. ಭೂಸ್ವಾಧೀನ, ಭೂಪರಿವರ್ತನೆ ಇತ್ಯಾದಿಗಳ ಬಗ್ಗೆಯೂ ತನಿಖೆ ನಡೆಸಿದೆ. ಲೋಕಾಯುಕ್ತ ಪೊಲೀಸರ ತನಿಖಾ ವ್ಯಾಪ್ತಿಯಲ್ಲಿ ಇಡಿ ಪ್ರವೇಶಿಸಿದೆ. ಮುಡಾಗೆ ಹಿಂತಿರುಗಿಸಿರುವ 14 ನಿವೇಶನಗಳನ್ನು ಇ.ಡಿ ಜಪ್ತಿ ಮಾಡಿಲ್ಲ. ಆದರೆ ಇತರೆ 160 ನಿವೇಶನಗಳನ್ನು ಇ.ಡಿ ಜಪ್ತಿ ಮಾಡಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲವೆಂದು ವರದಿ ಸಲ್ಲಿಸಿದ್ದಾರೆ ಎಂದು ಸಿಎಂ ಪತ್ನಿ ಪಾರ್ವತಿ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...