ಮುಡಾ ಪ್ರಕರಣ: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ತಡೆಯಾಜ್ಞೆ ಮುಂದುವರಿಕೆ

Date:

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಇ.ಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ.

ಇ.ಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರವರೆಗೆ ಇ.ಡಿ ಸಮನ್ಸ್‌ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ.

ಇಂದು ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರು 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್‌ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆಬ್ರವರಿ 20ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದ್ದು ಅಲ್ಲಿಯವರೆಗೆ ಇಬ್ಬರಿಗೂ ಮಧ್ಯಂತರ ರಕ್ಷಣೆ ಮುಂದುವರಿಯಲಿದೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಇ.ಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಮಾಡಿದ್ದರು. ಇ.ಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇ.ಡಿ ಪರ ಹೆ್ಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿದ್ದು, ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್‌ನ ಇತ್ತೀಚಿನ ತೀರ್ಪು ಇದ್ದು, ಆರೋಪಿಗೆ ಸಮನ್ಸ್ ಜಾರಿಗೊಳಿಸಬೇಕೆಂಬ ನಿಯಮವಿಲ್ಲ ಎಂದರು.

ಸಚಿವ ಭೈರತಿ ಸುರೇಶ್ ಪರ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿದರು ಇ.ಡಿ ತನಿಖಾಧಿಕಾರಿಗಳು ನಮೂನೆಯೊಂದನ್ನು ಕಳುಹಿಸಿದ್ದಾರೆ. ಇದರಲ್ಲಿ ಭೈರತಿ ಕುಟುಂಬದವರು, ಉದ್ಯೋಗಿಗಳು ಇತರರ ವಿವರ ಕೇಳಿದ್ದಾರೆ. ಇದು ಅವರ ಖಾಸಗಿತನದ ಸ್ಪಷ್ಟ ಉಲ್ಲಂಘನೆ. 14 ನಿವೇಶನ ಹಂಚಿಕೆಗೂ ಭೈರತಿ ಸುರೇಶ್‌ಗೂ ಸಂಬಂಧವಿಲ್ಲ. ಮುಡಾದಲ್ಲಿ ಭೈರತಿ ಸುರೇಶ್ ಯಾವುದೇ ಹುದ್ದೆ ವಹಿಸಿಕೊಂಡಿಲ್ಲ. ಹೀಗಾಗಿ ಇ.ಡಿ ಸಮನ್ಸ್ ಕಾನೂನುಬಾಹಿರವೆಂದು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...