ಮೈಸೂರು ದಸರಾ | ಪ್ರವಾಸಿ ವಾಹನಗಳಿಗಿಲ್ಲ ತೆರಿಗೆ ವಿನಾಯಿತಿ

Date:

ದಸರಾ ಮಹೋತ್ಸವಕ್ಕೆ ಮೈಸೂರಿಗೆ ಪ್ರವೇಶಿಸುವ ಪ್ರವಾಸಿ ವಾಹನಗಳಿಗೆ ರಾಜ್ಯ ಸರ್ಕಾರ ಈ ಬಾರಿ ತೆರಿಗೆ ವಿನಾಯಿತಿ ಘೋಷಿಸಿಲ್ಲ. ರಾಜ್ಯದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಬೊಕ್ಕಸಕ್ಕೆ ಈಗಾಗಲೇ ಹೆಚ್ಚಿನ ಹೊರೆಯಾಗಿರುವುದರಿಂದ ತೆರಿಗೆ ವಿನಾಯಿತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆಯ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

“ತೆರಿಗೆ ವಿನಾಯಿತಿ ನೀಡದಿರುವುದರಿಂದ ರಾಜ್ಯಕ್ಕೆ ಪ್ರವೇಶಿಸುವ ಪ್ರವಾಸಿ ವಾಹನಗಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಫೆಡರೇಶನ್ ಆಫ್ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳು ತಿಳಿಸಿವೆ.

“ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭಿಸಿದ ನಂತರ ರಾಜ್ಯ ಸರ್ಕಾರ ಆದಾಯ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಆದರೆ ತೆರಿಗೆ ವಿನಾಯಿತಿ ನೀಡುವ ಮೂಲಕ ಪ್ರವಾಸಿಗರ ಒಳಹರಿವು ಹೆಚ್ಚಾಗುತ್ತದೆ. ಇದರಿಂದ ಪರೋಕ್ಷ ತೆರಿಗೆಗಳ ಮೂಲಕ ಆದಾಯ ಗಳಿಸಬಹುದು ಎಂಬುದನ್ನು ಅರಿತುಕೊಳ್ಳಲು ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ವರ್ಷ ದಸರಾಗೆ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳದಿಂದ ಸುಮಾರು 10,000 ಹಳದಿ ಬೋರ್ಡ್ ಕಾರುಗಳು, 3,000 ಮ್ಯಾಕ್ಸಿ ಕ್ಯಾಬ್‌ಗಳು ಮತ್ತು ಸುಮಾರು 1,000 ಬಸ್‌ಗಳು ಮೈಸೂರಿಗೆ ಬರುತ್ತವೆ. ಸಾವಿರಾರು ಪ್ರಯಾಣಿಕರು ಸಾಂಸ್ಕೃತಿಕ ನಗರಕ್ಕೆ ಬರುತ್ತಾರೆ. ಜತೆಗೆ ಹತ್ತಿರದ ಪ್ರವಾಸಿ ತಾಣಗಳ ಸುತ್ತಲೂ ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ದಸರಾ ಹಬ್ಬದ ಸಮಯದಲ್ಲಿ 15 ದಿನಗಳ ಅವಧಿಗೆ ತೆರಿಗೆ ವಿನಾಯಿತಿ ನೀಡುತ್ತಿತ್ತು. ಆದರೆ ಈ ವರ್ಷ ವಿನಾಯಿತಿ ನೀಡದಿರಲು ನಿರ್ಧರಿಸಿದೆ. ಇದರಿಂದ ಗ್ಯಾರಂಟಿ ಯೋಜನೆಗಳನ್ನು ನಡೆಸಲು ಸರ್ಕಾರ ಭಾರೀ ಆರ್ಥಿಕ ಹೊರೆಯನ್ನು ಅನುಭವಿಸುತ್ತಿರುವುದು ಕಂಡುಬರುತ್ತಿದೆ” ಎಂದು ಒಕ್ಕೂಟದ ನಾಮನಿರ್ದೇಶಿತ ಅಧ್ಯಕ್ಷ ನಟರಾಜ್ ಶರ್ಮಾ ಅಭಿಪ್ರಾಯ ವ್ಯಕ್ತಪಡಿಸಿದರು.

“ಈ ವರ್ಷ ತೆರಿಗೆ ವಿನಾಯಿತಿ ನೀಡುವ ಮೂಲಕ ಉಂಟಾಗುವ ನಷ್ಟವನ್ನು ಮಾತ್ರ ಸರ್ಕಾರ ಲೆಕ್ಕಹಾಕಿದೆ. ಆದರೆ ಪ್ರವಾಸಿಗರ ಮೂಲಕ ಪಡೆಯಬಹುದಾದ ನೇರ ಮತ್ತು ಪರೋಕ್ಷ ತೆರಿಗೆಗಳನ್ನು ಹಾಗೂ ತಮ್ಮ ಆದಾಯಕ್ಕಾಗಿ ಪ್ರವಾಸಿಗರನ್ನು ಮಾತ್ರ ಅವಲಂಬಿಸಿರುವ ಜನರ ಜೀವನೋಪಾಯವನ್ನು ಪರಿಗಣಿಸಿಲ್ಲ” ಎಂದು ಶರ್ಮಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮಹಿಷಾ ದಸರಾ ಅಸಂಖ್ಯಾತರಿಗೆ ಶಕ್ತಿ ತುಂಬಿದೆ: ಪಿ.ಎನ್. ರಾಮಯ್ಯ

“55 ಆಸನಗಳಿರುವ ಇತರ ರಾಜ್ಯದ ಬಸ್‌ ಸುಮಾರು 18,000 ರೂ.ಗಳನ್ನು ತೆರಿಗೆಯಾಗಿ ಪಾವತಿಸುತ್ತದೆ. ಜತೆಗೆ ವಾಹನದ ಪ್ರಕಾರ ಮತ್ತು ಆಸನ ಸಾಮರ್ಥ್ಯದ ಮೇಲೆ ತೆರಿಗೆ ಬದಲಾಗುತ್ತದೆ” ಎಂದು ತಿಳಿಸಿದರು.

“ಪ್ರತಿ ವರ್ಷ ದಸರಾ ಉತ್ಸವ ಪ್ರಾರಂಭವಾಗುವ ಒಂದು ದಿನ ಮೊದಲು ವಾಹನಗಳ ತೆರಿಗೆ ವಿನಾಯಿತಿಯನ್ನು ಘೋಷಿಸುತ್ತಿದ್ದರು. ಈ ಬಾರಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆಯದ ಕಾರಣ ತೆರಿಗೆ ವಿನಾಯಿತಿಯನ್ನು ಘೋಷಿಸಿಲ್ಲ” ಎಂದು ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...