ಮೈಸೂರು | ರಾಜ್ಯದಲ್ಲಿ 500 ಹೊಸ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನಿವಾಸಿ ಭಾರತೀಯರ ನೆರವು

Date:

ಕರ್ನಾಟಕದ ಪಾರಂಪರಿಕ ತಾಣಗಳ ಅಭಿವೃದ್ಧಿಗೆ ಅನಿವಾಸಿ ಭಾರತೀಯರ ನೆರವು ಪಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಅಭಿವೃದ್ದಿಗಾಗಿ ರಾಜ್ಯಾದ್ಯಂತ ಹೊಸದಾಗಿ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿಸಲಾಗಿದೆ. ಅವುಗಳನ್ನು ಉಳಿಸಿ ಸಂರಕ್ಷಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟಿಲ್‌ ಹೇಳಿದ್ದಾರೆ.

ಮೈಸೂರು ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಮೈಸೂರಿನ ಪುರಭವನ ಎದುರು ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಶುಕ್ರವಾರ ಆಯೋಜಿಸಿದ್ದ ಪಾರಂಪರಿಕ ಟಾಂಗಾ ಸವಾರಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು ಹಾಗೂ ಸ್ಮಾರಕಗಳಿವೆ. ಇವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡಗಳನ್ನು ಸರ್ಕಾರ ಗುರುತಿಸಿದೆ. ಇನ್ನೂ ಎಲ್ಲ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರವೊಂದೇ ಸಂರಕ್ಷಣೆ ಮಾಡಲು ಆಗುವುದಿಲ್ಲ. ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮೆರಿಕಾದ ಅನಿವಾಸಿ ಭಾರತಿಯರೊಡನೆ ಆನ್‌ಲೈನ್ ಮೂಲಕ (ಜೂಮ್ ಮೀಟಿಂಗ್) ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂಧ ಚರ್ಚಿಸಿದ್ದೇನೆ. ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

“ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದಾಗಿದೆ. ಇಂತಹ ಕಟ್ಟಡಗಳನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು “ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮ”ವನ್ನು ಹಮ್ಮಿಕೊಂಡಿದ್ದು, ಯಶಸ್ವಿಯಾಗಿ ಸಾಗುತ್ತಿದೆ” ಎಂದರು.

ವಿಜಯನಗರ ಸಾಮ್ರಾಜ್ಯ ಆಚರಿಸಿಕೊಂಡು ಬಂದಿದ್ದ ದಸರಾ ಪದ್ದತಿಯನ್ನು ಮೈಸೂರಿನ ಮಹಾರಾಜರು ಮುಂದುವರೆಸಿಕೊಂಡು ಬರುವ ಮೂಲಕ ಇಡೀ ಜಗತ್ತು ಮೈಸೂರಿನತ್ತ ನೋಡುವಂತೆ ಮಾಡಿದ್ದಾರೆ. ಇದಕ್ಕೆ ಮೈಸೂರು ಮಹಾರಾಜರಿಗೆ ನಾಡಿನ ಬಗ್ಗೆ ಇದ್ದ ಅಭಿಮಾನವೇ ಕಾರಣ” ಎಂದು ಎಚ್ ಕೆ ಪಾಟಿಲ್ ಹೇಳಿದರು.

ಕನ್ನಡ ನಾಡಿಗೆ ಹಬ್ಬವಾಗಿರುವ ದಸರಾ ಮೈಸೂರಿಗಾಗಲಿ, ನಾಡಿಗಾಗಲಿ ಸೀಮಿತವಾಗಿಲ್ಲ. ವಿಶ್ವವಿಖ್ಯಾತವಾಗಿರುವ ದಸರಾ ಇಡೀ ವಿಶ್ವಕ್ಕೆ ಶ್ರೇಷ್ಠವಾಗಿದೆ. ರಾಜ್ಯದ ಮುಖ್ಯಂಮತ್ರಿ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ದಸರಾ ಮಹೋತ್ಸವದ ಬಗ್ಗೆ ಅಪಾರ ಕಾಳಜಿ ವಹಿಸಿದ್ದು, ದಸರಾ ಯಶಸ್ವಿಯಾಗಲು ಶ್ರಮಿಸುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ಕವಿತೆಗೆ ಭಾಷೆಯ ಅಂತರವಿಲ್ಲ: ಡಾ. ಎಚ್.ಸಿ ಮಹದೇವಪ್ಪ

ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಎಚ್‌ ಕೆ ಪಾಟೀಲ್‌ ದಂಪತಿಗೆ ಮಹಾಪೌರಾಯುಕ್ತ ಶಿವಕುಮಾರ್, ಪಾರಂಪರಿಕ ಹಾಗೂ ಪುರಾತತ್ವ ಇಲಾಖೆಯ ಆಯುಕ್ತ ಎ. ದೇವರಾಜು, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಎಂ ಕೆ ಸವಿತಾ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್‌ಗೌಡ ಅವರು ಬಾಗಿನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಹಲವು ದಂಪತಿಗಳು ಟಾಂಗಾದಲ್ಲಿ ಸಂಚರಿಸಿ ಖುಷಿ ಪಟ್ಟರು. ಸಚಿವ ಎಚ್‌ ಕೆ ಪಾಟಿಲ್‌ ದಂಪತಿಗಳೂ ಕೂಡ ಪಾರಂಪರಿಕ ಟಾಂಗಾದಲ್ಲಿ ಕುಳಿತು ಬೆಳಗಿನ ಸಮಯದಲ್ಲಿ ಮೈಸೂರು ಸಂಭ್ರಮ ನೋಡಿ ಸಂತಸಗೊಂಡರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...