ನಕಲಿ ಸ್ಯಾಂಡಲ್ ಸೋಪ್ ತಯಾರಿಕೆ | ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿಯವರು: ಪ್ರಿಯಾಂಕ್ ಖರ್ಗೆ

Date:

ಹೈದರಾಬಾದ್​ನಲ್ಲಿ ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಆರೋಪಿಗಳಿಬ್ಬರು ಬಿಜೆಪಿ ನಾಯಕರು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿತ ಜೈನ್​ಗಳಿಬ್ಬರೂ ಕೂಡ ಬಿಜೆಪಿಯ ಸಕ್ರಿಯ ನಾಯಕರು ಹಾಗೂ ಕಾರ್ಯಕರ್ತರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಸಚಿವ ಎಂಬಿ ಪಾಟೀಲ್ ಅವರಿಗೆ ಅನಾಮಿಕನೊಬ್ಬ ಕರೆ ಮಾಡುತ್ತಾನೆ. ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ಮಾರಾಟದ ಬಗ್ಗೆ ಮಾಹಿತಿ ನೀಡುತ್ತಾನೆ. ಎಂ.ಬಿ ಪಾಟೀಲ್​ ಅವರು ಇಲ್ಲಿನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟದ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡುತ್ತಾರೆ. ನಂತರ ನಮ್ಮ ಅಧಿಕಾರಿಗಳು ನಕಲಿ ಸೋಪ್ ತಯಾರಿಕೆ ಮತ್ತು ಮಾರಾಟ ಜಾಲ ಪತ್ತೆ ಹಚ್ಚಲು ಮುಂದಾದರು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ನಮ್ಮ ಅಧಿಕಾರಿಗಳು ಹೈದರಾಬಾದ್​ಗೆ ತೆರಳಿ 25 ಲಕ್ಷ ರೂ. ಆರ್ಡರ್ ಇದೆ ಅಂತ ಹೇಳುತ್ತಾರೆ. ಬಹಳ ದೊಡ್ಡ ಆರ್ಡರ್ ಇರುವುದರಿಂದ ಕಾರ್ಖಾನೆಗೆ ಬರುತ್ತೇವೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಾರೆ. ಬಹಳ ಸೂಕ್ಷ್ಮವಾಗಿ ಈ ಕಾರ್ಯಾಚರಣೆ ನಡೆಯುತ್ತದೆ. ನಕಲಿ ಎಂದು ಖಚಿತವಾದ ಮೇಲೆ, ನಮ್ಮ ಅಧಿಕಾರಿಗಳು ಕಾರ್ಖಾನೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ನಕಲಿ ಸೋಪ್​ ಮತ್ತು ಕವರ್​ಗಳು ಪತ್ತೆಯಾಗಿವೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಕಿ ಖಟ್ಲೆಗಳ ಭಾರದಡಿ ಕುಸಿದಿರುವ ನ್ಯಾಯಾಂಗ ಮತ್ತು ಸಿನಿಕ ಸಾರ್ವಜನಿಕರು

ಪ್ರಕರಣ ಸಂಬಂಧ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ಐಆರ್ ದಾಖಲಾಗಿದೆ. ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಹಾಗೂ ಮಾಜಿ ಶಾಸಕರ ಪುತ್ರನ ಜೊತೆ ಆರೋಪಿತರ ಸಂಪರ್ಕವಿದೆ. ಕಾರ್ಯಾಚರಣೆ ನಡೆದಿರುವುದು ರಾಜ್ಯದ ಆಸ್ತಿ ಉಳಿಸಿಕೊಳ್ಳುವುದಕ್ಕಾಗಿ. ಇದರಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ. ಬಿಜೆಪಿಯವರು ದುಡ್ಡು ಮಾಡುವುದಕ್ಕೆ ಯಾವುದಕ್ಕೂ ಹೇಸುವುದಿಲ್ಲ ಎಂದು ವಾಗ್ದಾಳಿ ಮಾಡಿದರು.

ಬಿಜೆಪಿಯ ಎಂಎಲ್ಎಗಳ ಜೊತೆಗೆ ನಕಲಿ ಸೋಪ್ ತಯಾರಕ ಮಹಾವೀರ್ ಜೈನ್ ಇದ್ದಾನೆ. ಕನ್ನಡಿಗರು ಕಷ್ಟಪಟ್ಟು ಬೆವರು ಸುರಿಸಿ ಬಂಡವಾಳ ಹಾಕಿದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದಾರೆ. ಬಿಜೆಪಿಯ ಅಧಿಕೃತ ಪದಾಧಿಕಾರಿಗಳ ಜೊತೆಗೆ ಮಹಾವೀರ್ ಜೈನ್ ಇದ್ದಾನೆ. ಮಣಿಕಂಠ ರಾಥೋಡ್​ಗೂ ನಕಲಿ ಸೋಪ್ ತಯಾರಿಕರಿಗೂ ಏನು ನಂಟು? ಪೃಥ್ವಿ ಸಿಂಗ್ ಸಲುವಾಗಿ ಎರಡು ದಿನ ಕಲಾಪ ಹಾಳು ಮಾಡಿದರು. ಈ ಪೃಥ್ವಿ ಸಿಂಗ್ ಪೊಲೀಸ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಯಾಕೆ ಇವರೆಲ್ಲ ಬಿಜೆಪಿಯವರೇ ಆಗಿರುತ್ತಾರೆ? ಎಂದು ಪ್ರಶ್ನಿಸಿದರು.

ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂಬುದೆಲ್ಲ ಸತ್ಯ ಇರಬೇಕು. ರಾಜ್ಯದ ಆಸ್ತಿ ಮಾರಾಟ ಮಾಡುವವರಿಗೆ ಬಿಜೆಪಿ ಟಿಕೆಟ್ ನೀಡುತ್ತದೆ. ಯಾದಗಿರಿಯಲ್ಲಿ 700 ಕ್ವಿಂಟಾಲ್ ಗರೀಬ್ ಕಲ್ಯಾಣ್ ಅಕ್ಕಿ ಬಿಜೆಪಿಯವರ ಗೋಡೌನ್​ನಲ್ಲಿ ಸಿಕ್ಕಿದೆ. ಅಕ್ಕಿ ಕದ್ದವರ‌ನ್ನು ಪ್ರಧಾನಿ ಮೋದಿ ಪಕ್ಷದಲ್ಲಿ ಯಾಕೆ ಇಟ್ಕೊಂಡಿದ್ದೀರಿ? ಇವರ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ತೆಲಂಗಾಣ ಡಿಸಿಎಂ ಜೊತೆಗೆ ತನಿಖೆ ಮಾಡುವ ಬಗ್ಗೆ ಮಾತನಾಡಿದ್ದೇವೆ. ಆರೋಪಿತರ ತಪ್ಪಿಲ್ಲ ಅಂತ ಬಿಜೆಪಿಯವರು ಸಾಬೀತುಪಡಿಸಲಿ ಎಂದು ಸವಾಲು ಎಸೆದರು.

ಬಿಜೆಪಿಯವರು ಯಾರೂ ರಾಮಾಯಣ ಓದಿಲ್ಲ. ಬಿಜೆಪಿಯವರಿಗೆ 4 ಸಾಲು ಹನುಮಾನ್ ಚಾಲೀಸಾ ಕೂಡ ಬರಲ್ಲ. ಬಿಜೆಪಿಯವರಿಗೆ ಪ್ರಾಣ ಪ್ರತಿಷ್ಠಾಪನೆಯ ಅರ್ಥವೇ ಗೊತ್ತಿಲ್ಲ. ಶಂಕರಾಚಾರ್ಯರ ಪೀಠದ ಶ್ರೀಗಳ ಪ್ರಶ್ನೆಗೆ ಉತ್ತರ ಕೊಡಲಿ ಸಾಕು. ಬಿಜೆಪಿ ನಾಯಕರಿಗೆ ಕಾಂಗ್ರೆಸ್​ನವರು ಪ್ರಶ್ನೆ ಕೇಳುತ್ತಿಲ್ಲ. ಶಂಕರಾಚಾರ್ಯರು ಕೇಳಿದ ಪ್ರಶ್ನೆಗೆ ಬಿಜೆಪಿಯವರು ಉತ್ತರ ಕೊಡಲಿ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...