ಮೈಸೂರು ಸ್ಯಾಂಡಲ್‌ ಸೋಪ್: ಸರ್ಕಾರಿ ಸಂಸ್ಥೆಗೆ 416 ಕೋಟಿ ರೂ. ದಾಖಲೆಯ ಲಾಭ

Date:

ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ಉತ್ಪಾದಿಸುವ ಸರ್ಕಾರಿ ಸ್ವಾಮ್ಯದ ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ’ವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿದೆ. ಅಲ್ಲದೆ, 416 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷದ ಲಾಭಕ್ಕಿಂತ 54 ಕೋಟಿ ರೂ. ಹೆಚ್ಚು ಲಾಭವಾಗಿದೆ ಎಂದು ಕೆಎಸ್‌ಡಿಎಲ್ ಹೇಳಿಕೊಂಡಿದೆ.

ಕೆಎಸ್‌ಡಿಎಲ್‌ನ ವಹಿವಾಟು ಮತ್ತು ಲಾಭದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್ ಮತ್ತು ಕೆಎಸ್ ಡಿಎಲ್ ಅಧ್ಯಕ್ಷ ಅಪ್ಪಾಜಿ ಸಿ.ಎಸ್ ನಾಡಗೌಡ ಅವರು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “2024-25ರ ಹಣಕಾಸು ವರ್ಷದಲ್ಲಿ ಬರೋಬ್ಬರಿ 43,144 ಟನ್‌ಗಳಷ್ಟು ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಭಾರೀ ಪ್ರಮಾಣದ ಸಾಬೂನು ಮತ್ತು ಮಾರ್ಜಕಗಳ ಮಾರಾಟದಿಂದಾಗಿ ದಾಖಲೆಯ ಲಾಭ ಬಂದಿದೆ. ಲಾಭದಲ್ಲಿ ನಿಯಮಾನುಸಾರ 30% (123 ಕೋಟಿ ರೂ.) ಮೊತ್ತವನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2023-24ರ ಆರ್ಥಿಕ ವರ್ಷದಲ್ಲಿ ಸಂಸ್ಥೆಯು 37,916 ಟನ್ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ 1,570 ಕೋಟಿ ರೂ. ವಹಿವಾಟು ನಡೆಸಿತ್ತು. ಆ ವರ್ಷ, 362 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಲಾಭದಲ್ಲಿ 108 ಕೋಟಿ ರೂ.ಗಳನ್ನು ಸರ್ಕಾರಕ್ಕೆ ಪಾವತಿ ಮಾಡಲಾಗಿತ್ತು” ಎಂದು ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಪ್ರಧಾನಿ ಮೋದಿ ನಿವೃತ್ತರಾಗುತ್ತಾರೆಯೇ? RSS ಕೇಂದ್ರ ಕಚೇರಿ ಭೇಟಿಯ ಉದ್ದೇಶವೇನು?

“ಕಳೆದ ವರ್ಷ ಲಾಭಂಶ ಕೊಡುವ ಸರ್ಕಾರಿ ಉದ್ದಿಮೆಗಳ ಪಟ್ಟಿಯಲ್ಲಿ ಕೆಎಸ್‌ಡಿಎಲ್‌ 21ನೇ ಸ್ಥಾನದಲ್ಲಿತ್ತು. ಈ ವರ್ಷ 3ನೇ ಸ್ಥಾನಕ್ಕೆ ಏರಿಕೆಯಾಗಿದೆ. 2024-25ರಲ್ಲಿ ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭ ಮೂರಲ್ಲಿಯೂ ಸಾರ್ವಕಾಲಿಕ ದಾಖಲೆ ಬರೆದಿದೆ” ಎಂದು ಹೇಳಿದ್ದಾರೆ.

“ಸಂಸ್ಥೆಯು ಮೈಸೋಪು, ಹ್ಯಾಂಡ್‌ ವಾಶ್, ಶವರ್ ಜೆಲ್, ಅಗರಬತ್ತಿ ಸೇರಿದಂತೆ 19 ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುತ್ತಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ಲಾಭಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇ-ಕಾಮರ್ಸ್ ಮತ್ತು ಆಧುನಿಕ ವ್ಯಾಪಾರ ಮಾದರಿಗಳನ್ನು ಸಂಸ್ಥೆಯು ಅಳವಡಿಸಿಕೊಳ್ಳುತ್ತಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...