ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡೇಟು

Date:

ಮೈಸೂರು ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಕಾಲಿಗೆ ಗುಂಡು ಹೊಡೆದಿರುವ ಘಟನೆ ಗುರುವಾರ ರಾತ್ರಿ ಮೈಸೂರಿನಲ್ಲಿ ನಡೆದಿದೆ.

ಗುರುವಾರ ಬೆಳಿಗ್ಗೆ ಬಾಲಕಿಯೊಬ್ಬಳ ಮೃತದೇಹ ವಸ್ತುಪ್ರದರ್ಶನ ಮೈದಾನದಲ್ಲಿ ಪತ್ತೆಯಾಗಿತ್ತು. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ಕೂಡ ವ್ಯಕ್ತವಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಅಕ್ಕಪಕ್ಕದ ಸಿಸಿ ಟಿವಿ ಪರಿಶೀಲಿಸಿದ ಪೊಲೀಸರು, ಮೈಸೂರು ತಾಲ್ಲೂಕು ಸಿದ್ಧಲಿಂಗಪುರದ ಕಾರ್ತಿಕ್ ಎಂಬ ವ್ಯಕ್ತಿ ಮೇಲೆ ಅನುಮಾನ ವ್ಯಕ್ತಪಡಿಸಿ ಆತನ ಬಂಧನಕ್ಕೆ ಜಾಲ ಬೀಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂವಿಧಾನ ಬದಲಿಸುವ ಸನಾತನಿಗಳ ಹುನ್ನಾರಕ್ಕೆ ವಕೀಲರೇ ದಾಳ

ಆರೋಪಿ ಕಾರ್ತಿಕ್ ಖಾಸಗಿ ಬಸ್ ಮೂಲಕ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಹೋಗಿದ್ದ ಎಂದು ತಿಳಿದು ಬಂದಿದ್ದು, ಕೊಳ್ಳೆಗಾಲದಲ್ಲಿ ಸಂಜೆ ಪತ್ತೆಯಾಗಿದ್ದ. ಆತನನ್ನು ವಶಕ್ಕೆ ಪಡೆದ ಪೊಲೀಸರು ರಾತ್ರಿ ಮೈಸೂರಿಗೆ ಕರೆತಂದಿದ್ದರು. ಮೈಸೂರಿಗೆ ಬಂದ ವೇಳೆ ಪೊಲೀಸರಿಂದ ಆರೋಪಿ ಕಾರ್ತಿಕ್ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆರೋಪಿ ಕಾರ್ತಿಕ್ ಕಾಲಿಗೆ ಗುಂಡು ಹೊಡೆದಿದ್ದಾರೆ ಎನ್ನಲಾಗಿದೆ.

ಸದ್ಯ ಆರೋಪಿ ಕಾರ್ತಿಕ್ ಗೆ ಮೈಸೂರಿನ‌ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...