ನಾಡೋಜ ವಿವಾದ | ಸಾರಿಗೆ ಇಲಾಖೆ ನಿವೃತ್ತ ಅಧಿಕಾರಿ ಸತ್ಯನ್‌ ಹೆಸರು ʼಲೋಕಭವನʼದಲ್ಲಿ ಸೇರ್ಪಡೆ?

Date:

ಇಂದು (ಫೆ.೨೪) ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಕೊಡ ಮಾಡುವ ನಾಡೋಜ ಪ್ರಶಸ್ತಿಗೆ ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ವ್ಯಕ್ತಿಯನ್ನು ಆಯ್ಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಶತಾಯುಷಿ ಪ್ರೊ ಸಿ ಮಹದೇವಪ್ಪ, ಡಾ ಜಿ ರಾಮಕೃಷ್ಣ ಮತ್ತು ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಎಚ್‌ ಸಿ ಸತ್ಯನ್‌ ಅವರಿಗೆ ನಾಡೋಜ ಪ್ರಶಸ್ತಿ ನೀಡುವುದಾಗಿ ಕುಲಪತಿ ಪ್ರೊ ಡಿ ವಿ ಪರಮಶಿವಮೂರ್ತಿ ನಿನ್ನೆ ಪ್ರಕಟಿಸಿದ್ದಾರೆ. ಪಟ್ಟಿ ಹೊರಬರುತ್ತಿದ್ದಂತೆ ಸತ್ಯನ್‌ ಹೆಸರಿಗೆ ಆಕ್ಷೇಪ ವ್ಯಕ್ತವಾಗಿದೆ. “ಈ ಹೆಸರು ವಿವಿ ಕಳಿಸಿದ ಪಟ್ಟಿಯಲ್ಲಿ ಇರಲಿಲ್ಲ” ಎಂದು ʼಈ ದಿನ.ಕಾಮ್‌ʼ ಗೆ ಹಂಪಿ ಯುನಿವರ್ಸಿಟಿ ಸಿಂಡಿಕೇಟ್‌ ಸದಸ್ಯರೊಬ್ಬರು ತಿಳಿಸಿದ್ದಾರೆ. ವಿವಿಯಿಂದ ಹತ್ತು ಸಾಧಕರ ಪಟ್ಟಿ ಕಳಿಸಿಕೊಡಲಾಗಿದೆ. ಅದರಲ್ಲಿ ಇಬ್ಬರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸತ್ಯನ್‌ ಹೆಸರು ರಾಜ್ಯಪಾಲರ ಆಯ್ಕೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ವಿವಿಗಳ ಪ್ರಶಸ್ತಿ, ಗೌರವ ಡಾಕ್ಟರೇಟ್‌, ನಾಡೋಜ ಸೇರಿದಂತೆ ಎಲ್ಲ ಪ್ರಶಸ್ತಿಗಳ ಪಟ್ಟಿ ರಾಜ್ಯಪಾಲರ ಕಚೇರಿಯಲ್ಲಿ ಫೈನಲ್‌ ಆಗುತ್ತದೆ. ವಿಶ್ವವಿದ್ಯಾಲಯದ ಸಿಂಡಿಕೇಟ್‌ನಲ್ಲಿ ಆಯ್ಕೆ ಮಾಡಿದ ಪಟ್ಟಿಯನ್ನು ರಾಜ್ಯಪಾಲರು ತಿರಸ್ಕರಿಸಬಹುದು ಅಥವಾ ಬೇರೆಯವರನ್ನು ಸೇರಿಸಬಹುದು ಎಂಬ ನಿಯಮವನ್ನು ರೂಪಿಸಿದೆ. ಆಯ್ಕೆ ಸಮಿತಿಯಲ್ಲಿ ಇರುವ ಮೂವರಲ್ಲಿ ಸಮಿತಿಯ ಅಧ್ಯಕ್ಷ ಮತ್ತು ಒಬ್ಬ ಸದಸ್ಯನನ್ನು ರಾಜ್ಯಪಾಲರೇ ಆಯ್ಕೆ ಮಾಡುತ್ತಾರೆ (ಬಹುತೇಕ ಉತ್ತರ ಭಾರತದವರೇ ಇರುತ್ತಾರೆ ಎಂಬ ಆರೋಪವಿದೆ). ಒಬ್ಬರು ವಿವಿಯ ನಾಮಿನೇಟೆಡ್‌ ಸದಸ್ಯರಿರುತ್ತಾರೆ. ಹಾಗಾಗಿ ಈ ಆಯ್ಕೆ ಸಂಪೂರ್ಣವಾಗಿ ರಾಜ್ಯಪಾಲರ ಹಿಡಿತದಲ್ಲಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಜಿ ರಾಮಕೃಷ್ಣ; ಕಾರಣವೇನು?

ಸದ್ಯ ಸತ್ಯನ್‌ ಹೆಸರು ರಾಜ್ಯಪಾಲರ ಕಚೇರಿಯಲ್ಲಿ ಸೇರ್ಪಡೆಯಾಗಿದೆ. ಸತ್ಯನ್‌ ಅವರ ವಿರುದ್ದ ಮೈಸೂರು ಲೋಕಾಯುಕ್ತದಲ್ಲಿ ಒಂದು ಪ್ರಕರಣದ ತನಿಖೆ ನಡೆಯುತ್ತಿದೆ. ಮೈಸೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ಬಾಕಿ ಇದೆ ಎಂದು ತಿಳಿದು ಬಂದಿದೆ. ಅಲ್ಲದೇ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನಾಡೋಜ ಗೌರವ ಮೀಸಲು. ಆದರೆ, ರಾಜಕೀಯ ಪ್ರಭಾವದ ಕಾರಣದಿಂದ ಬಹಳ ವರ್ಷಗಳ ಹಿಂದೆಯೇ ದೂರದರ್ಶನದ ಅಧಿಕಾರಿ ಮಹೇಶ್‌ ಜೋಶಿ ಅವರಿಗೆ ನಾಡೋಜ ಪ್ರಶಸ್ತಿ ನೀಡಿದಾಗ ವಿವಾದ ಉಂಟಾಗಿತ್ತು. ಆ ನಂತರವೂ ಹಲವರು ಅನರ್ಹರಿಗೆ ನಾಡೋಜ ಗೌರವ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...