ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಿ: ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಆಗ್ರಹ

Date:

ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು. ರಾಜ್ಯದಲ್ಲಿ ಕಾಂತರಾಜು ಆಯೋಗ ನಡೆಸಿರುವ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿ, ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ವಕ್ತಾರರಾದ ನಾಗರಾಜ್ ಯಾದವ್ ಆಗ್ರಹಿಸಿದರು.

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಶೇ.70 ರಷ್ಟಿರುವ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳ ಪ್ರಶ್ನೆ ಬಂದಾಗ ಒಂದಾಗಿ ಹೋರಾಡಬೇಕಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಳಸಿಕೊಂಡು, ಅವರು ಹೇಳಿದಂತೆ ನಾವು ಸಂಘಟಿತರಾಗಬೇಕಿದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿ ನಾವು ಇಂದು ಒಟ್ಟಾಗಿದ್ದೇವೆ’ ಎಂದರು.

ಸಂವಿಧಾನದ ಆಶಯಗಳನ್ನು ಉಳಿಸುವುದಕ್ಕಾಗಿ ನಾವು ಒಗ್ಗಟ್ಟಾಗಿದ್ದೇವೆ. ನಮ್ಮ ಸಾಮಾಜಿಕ ಹಾಗೂ ಶೈಕ್ಷಣಿಕ, ರಾಜಕೀಯ ಹಕ್ಕುಗಳಿಗಾಗಿ ಒಂದಾಗುತ್ತಿದ್ದೇವೆ. ಸಿದ್ದರಾಮಯ್ಯ ಅವರು ಆರು ವರ್ಷದ ಹಿಂದೆ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಾವು ಸ್ವಾಗತಿಸುತ್ತವೆ. ವರದಿಯನ್ನು ಸರ್ಕಾರ ಸ್ವೀಕಾರ ಮಾಡಿ, ಜಾರಿ ಮಾಡಬೇಕು ಎಂದು ಆಗ್ರಹಿಸುತ್ತೇವೆ’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

‘ಎಲ್ಲ ಶೋಷಿತ ವರ್ಗಗಳಿಗೆ ನ್ಯಾಯ ಕೊಡಿಸಬೇಕು, ಸಂವಿಧಾನಿಕ ಹಕ್ಕುಗಳನ್ನು ನೀಡಬೇಕು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಸಮೀಕ್ಷೆ ಮಾಡಿಸಿದ್ದಾರೆ. ಕಾಂತರಾಜು ಸಮಿತಿಯ ಎಲ್ಲ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮುದಾಯಗಳಿಗೆ ನೆರವಾಗಲು ಕೇಂದ್ರ ಸರ್ಕಾರ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು’ ಎಂದರು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾರೆ. ಶೋಷಿತ ವರ್ಗದವರಿಗೆ ನ್ಯಾಯ ಕೊಡಿಸುವ ಜೊತೆಗೆ, ಬಡವರಿಗೆ ಹಲವಾರು ಅಭಿವೃದ್ಧಿ ಕಾರ್ಯಕ್ರಮ ನೀಡಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಮಾತ್ರ. ಆದ್ದರಿಂದಲೆ ಶೋಷಿತ ವರ್ಗದವರು ಈ ಸರ್ಕಾರದ ಪರವಾಗಿ ನಿಂತಿದ್ದೇವೆ’ ಎಂದರು.

“ಸರ್ಕಾರ ಕಾಂತರಾಜು ಆಯೋಗದ ವರದಿಯನ್ನು ಸ್ವೀಕರಿಸಬೇಕು; ಸಮಿತಿಯು ಸಾಕಷ್ಟು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿದೆ. ಸಂವಿಧಾನದ ಆಶಯಗಳನ್ನು ಉಳಿಸಿವುದಕ್ಕೋಸ್ಕರ ಅಹಿಂದ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಕ್ಕಾಗಿ ಸರ್ಕಾರ ಈ ವರದಿಯನ್ನು ಸ್ವೀಕರಿಸಬೇಕು” ಎಂದು ನಾಗರಾಜ್ ಯಾದವ್ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...