ಧಾರವಾಡದಲ್ಲಿ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್‌ಗೆ ಚಾಲನೆ

Date:

ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್‌ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಅವರು ಶುಕ್ರವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನೈಡೆಕ್ ಕಂಪನಿಯ ಈ ಸಂಸ್ಥೆಯ ಸ್ಥಾಪನೆಗೆ ಐದು ತಿಂಗಳ ಹಿಂದೆ ನಾನೇ ಭೂಮಿಪೂಜೆ ನೆರವೇರಿಸಿದ್ದೆ. ಕಂಪನಿಯು ಕೇಳಿದ್ದ ಸವಲತ್ತುಗಳನ್ನೆಲ್ಲ ರಾಜ್ಯ ಸರಕಾರವು ತ್ವರಿತವಾಗಿ ಪೂರೈಸಿದೆ. ಇದಕ್ಕೆ ತಕ್ಕಂತೆ ಕಂಪನಿಯು ಕ್ಷಿಪ್ರಗತಿಯಲ್ಲಿ ಇಷ್ಟೊಂದು ಅಗಾಧ ಬಂಡವಾಳ ಹೂಡಿ, ಈ ಆಧುನಿಕ ಕೇಂದ್ರವನ್ನು ಸ್ಥಾಪಿಸಿರುವುದು ಮಾದರಿಯಾಗಿದೆ” ಎಂದರು.

“ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ನಾವೀನ್ಯತೆ ಮತ್ತು ತಂತ್ರಜ್ಞಾನ ಆಧಾರಿತ ಉದ್ಯಮ ಕೇಂದ್ರವಾಗಿದೆ. ಇಲ್ಲಿ ಹೊಸಹೊಸ ಔದ್ಯಮಿಕ ಕಲ್ಪನೆಗಳು ಮತ್ತು ಸಂಶೋಧನೆ ಜೊತೆಗೂಡಲಿವೆ. ಅಂತಿಮವಾಗಿ ಇದು ಕೈಗಾರಿಕಾ ಅಭಿವೃದ್ಧಿಯ ಹೆದ್ದಾರಿಯನ್ನು ಸೃಷ್ಟಿಸಲಿವೆ” ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತರ ಕರ್ನಾಟಕ ಭಾಗದಲ್ಲಿ ಜಪಾನಿನ ಕಂಪನಿಯೊಂದು ಮಾಡಿರುವ ಬೃಹತ್ ಹೂಡಿಕೆ ಇದಾಗಿದೆ. ಇದರಿಂದ ಇಲ್ಲಿ ಉದ್ಯೋಗ ಸೃಷ್ಟಿ ಕೂಡ ಆಗಲಿದ್ದು, ಪರೋಕ್ಷವಾಗಿ ಸ್ಥಳೀಯರಿಗೆ ಕೂಡ ಲಾಭವಾಗಲಿದೆ. ರಾಜ್ಯ ಸರಕಾರವು ಕೂಡ ತನ್ನ ಹೊಸ ಕೈಗಾರಿಕಾ ನೀತಿಯಲ್ಲಿ ಬೆಂಗಳೂರನ್ನು ಹೊರತುಪಡಿಸಿ ಬೇರೆ ಬೇರೆ ಭಾಗಗಳಲ್ಲಿ ಉದ್ಯಮ ಸ್ಥಾಪಿಸುವಂತೆ ಹಲವು ರಚನಾತ್ಮಕ ಕ್ರಮಗಳನ್ನು ಅಳವಡಿಸಲಾಗಿದೆ” ಎಂದು ಅಭಿಪ್ರಾಯಪಟ್ಟರು.

“ನೈಡೆಕ್ ಕಂಪನಿ ಸೇರಿದಂತೆ ಜಪಾನಿನ ಹತ್ತಾರು ಕಂಪನಿಗಳು ರಾಜ್ಯದಲ್ಲಿ ನೆಲೆಯೂರಿದ್ದು, ನಮ್ಮಲ್ಲಿ ಜಪಾನಿ ಕೈಗಾರಿಕಾ ಟೌನ್ ಶಿಪ್ ಕೂಡ ಇದೆ. ತಾವು ಇತ್ತೀಚಿಗೆ ಜಪಾನಿಗೆ ಭೇಟಿ ನೀಡಿದಾಗ ರಾಜ್ಯಕ್ಕೆ 4,500 ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆ ಖಾತ್ರಿ ಸಿಕ್ಕಿದೆ. ನಮ್ಮ ಹಿಂದಿನ ಬಾರಿಯ ಜಪಾನ್ ಮತ್ತು ದಕ್ಷಿಣ ಕೊರಿಯಾ ಭೇಟಿಯಲ್ಲಿ ಕೂಡ 6,000 ಕೋಟಿ ರೂಪಾಯಿ ಹೂಡಿಕೆ ಬಂದಿತ್ತು” ಎಂದು ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ನೈಡೆಕ್ ಕಾರ್ಪೊರೇಷನ್ ಅಧ್ಯಕ್ಷ ಹಿರೋಶಿ ಕೋಬೆ, ಕಂಪನಿಯ ಮೋಷನ್ ಮತ್ತು ಎನರ್ಜಿ ವಿಭಾಗದ ಮುಖ್ಯಸ್ಥ ಮೈಕೆಲ್ ಬ್ರಿಗ್ಸ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...