ಕರ್ನಾಟಕ ಹೈಕೋರ್ಟ್‌ನ ಕೆಲ ನ್ಯಾಯಾಧೀಶರನ್ನು ವರ್ಗಾಯಿಸಿ: ಸುಪ್ರೀಂಗೆ ನೈಜ ಹೋರಾಟಗಾರರ ವೇದಿಕೆ ಮನವಿ

Date:

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೌರವಾನ್ವಿತ ನ್ಯಾಯಮೂರ್ತಿಗಳ ರಕ್ತ ಸಂಬಂಧಿಗಳು ಮತ್ತು ಹತ್ತಿರದ ಸಂಬಂಧಿಗಳು ವಕೀಲಿ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ನ್ಯಾಯ ವಿತರಣೆಯಲ್ಲಿ ವಾದಿ, ಪ್ರತಿವಾದಿಗಳು ಮತ್ತು ಕಕ್ಷಿದಾರರಿಗೆ ನ್ಯಾಯಾಲಯಗಳಲ್ಲಿ ಪಾರದರ್ಶಕತೆಯ ವಿಶ್ವಾಸಾರ್ಹ ನ್ಯಾಯ ವಿತರಣೆ ಬಗ್ಗೆ ನಂಬಿಕೆ ಇಲ್ಲದಂತಾಗಿದೆ. ಹಾಗಾಗಿ, ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಇತರ ರಾಜ್ಯಗಳ ಉಚ್ಚ ನ್ಯಾಯಾಲಯಗಳಿಗೆ ವರ್ಗಾವಣೆ ಮಾಡಬೇಕೆಂದು ನೈಜ ಹೋರಾಟಗಾರರ ವೇದಿಕೆಯು ಸುಪ್ರೀಂ ಕೋರ್ಟಿಗೆ ಮನವಿ ಮಾಡಿದೆ.

ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿರುವ ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ ವೆಂಕಟೇಶ್ ಹಾಗೂ ಬಿ.ಎಸ್ ಲೋಕೇಶ್, ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ತಮ್ಮ ದೂರಿನಲ್ಲಿ ನೈಜ ಹೋರಾಟಗಾರರ ವೇದಿಕೆಯ ಮುಖಂಡರು ಗಂಭೀರ ಆರೋಪಗಳನ್ನು ಮಾಡಿದ್ದು, ನಮಗೆ ನ್ಯಾಯಾಂಗದಲ್ಲಿ ಅಪಾರವಾದ ನಂಬಿಕೆ, ವಿಶ್ವಾಸ, ಮತ್ತು ಗೌರವವನ್ನು ಹೊಂದಿದ್ದೇವೆ. ಭಾರತ ದೇಶದ ಎಲ್ಲ ನಾಗರಿಕರಿಗೂ ತ್ವರಿತವಾಗಿ ನ್ಯಾಯ ವಿತರಣೆ ಮಾಡುವಲ್ಲಿ ದೇಶದ ಎಲ್ಲ ನ್ಯಾಯಮೂರ್ತಿಗಳು ಅತ್ಯಂತ ಶ್ರಮ ವಹಿಸುತ್ತಿರುವುದು ಸ್ವಾಗತಾರ್ಹವಾಗಿದೆ. ಆದರೆ, ದೇಶದ ಅತ್ಯಂತ ಕಟ್ಟ ಕಡೆಯ ವ್ಯಕ್ತಿಯು ಕೂಡ ನ್ಯಾಯ ವಂಚಿತರಾಗಬಾರದು ಎಂಬ ಆಶಯ ನಮ್ಮೆಲ್ಲರಿಗೂ ಇದೆ. ಆದರೆ ನ್ಯಾಯವನ್ನು ಕೇಳಿ ಉಚ್ಚ ನ್ಯಾಯಾಲಯ ಅಥವಾ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗದೇ ಇರುವುದು ದುರದೃಷ್ಟಕರ ಸಂಗತಿಯಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಂಗದಲ್ಲೂ ಕೂಡ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಅಘಾತಕಾರಿ ವಿಷಯವನ್ನು ಹಲವಾರು ನ್ಯಾಯಮೂರ್ತಿಗಳು ಈ ಹಿಂದೆ ಹೇಳಿರುವುದನ್ನು ಮಾಧ್ಯಮಗಳಲ್ಲಿ ನಾವು ಓದಿದ್ದೇವೆ. ಇದಕ್ಕೆ ಪೂರಕವಾಗಿ ಹಲವಾರು ನ್ಯಾಯಾಧೀಶರುಗಳ ಮೇಲೆ ಭ್ರಷ್ಟಾಚಾರದ ಆರೋಪಗಳು ಸಾರ್ವಜನಿಕ ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹೋರಾಟಗಾರರ ವೇದಿಕೆಯು ತಿಳಿಸಿದೆ.

ನ್ಯಾಯ ವಿತರಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ವಕೀಲ ವೃಂದದ ಬಗ್ಗೆ ನಮಗೆಲ್ಲರಿಗೂ ಅತ್ಯಂತ ಪ್ರೀತಿಪೂರ್ವಕವಾದ ಗೌರವ ಮತ್ತು ವಿಶ್ವಾಸವಿದೆ ಎಂಬುದನ್ನು ಸ್ಪಷ್ಟಪಡಿಸುತ್ತಾ,
ಕರ್ನಾಟಕ ರಾಜ್ಯದಲ್ಲಿಯೂ ಕೂಡ ಕಾರ್ಯನಿರ್ವಹಿಸಿದ ಹಲವಾರು ನ್ಯಾಯಾಧೀಶರುಗಳು ಮತ್ತು ನ್ಯಾಯಮೂರ್ತಿಗಳ ಮೇಲೆ ಭ್ರಷ್ಟಾಚಾರದ ಆರೋಪಗಳು ಇವೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಆದರೆ ಇದಕ್ಕೆ ಪೂರಕವಾದ ಸಾಕ್ಷಿ ಆಧಾರಗಳು ಇಲ್ಲದೆ ಇರುವುದರಿಂದ ಒಂದು ರೀತಿಯಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರವು ಗುಪ್ತಗಾಮಿನಿಯಾಗಿ ನಿರಂತರವಾಗಿ ಹರಿಯುತ್ತಿದೆ ಎಂಬ ಅಂಶ ಅತ್ಯಂತ ಚಿಂತೆಗೆ ಎಡೆ ಮಾಡಿಕೊಟ್ಟಿದೆ. ಈ ಎಲ್ಲ ಹಿನ್ನೆಲೆಯನ್ನು ಗಮನಿಸಿದಾಗ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೌರವಾನ್ವಿತ ನ್ಯಾಯಮೂರ್ತಿಗಳ ರಕ್ತ ಸಂಬಂಧಿಗಳು ಮತ್ತು ಹತ್ತಿರದ ಸಂಬಂಧಿಗಳು ವಕೀಲಿ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರಿಂದ ನ್ಯಾಯ ವಿತರಣೆಯಲ್ಲಿ ವಾದಿ, ಪ್ರತಿವಾದಿಗಳು ಮತ್ತು ಕಕ್ಷಿದಾರರಿಗೆ ನ್ಯಾಯಾಲಯಗಳಲ್ಲಿ ಪಾರದರ್ಶಕತೆಯ ವಿಶ್ವಾಸಾರ್ಹ ನ್ಯಾಯ ವಿತರಣೆ ಬಗ್ಗೆ ನಂಬಿಕೆ ಇಲ್ಲದಂತಾಗಿದೆ. ಈ ವಿಷಯದಲ್ಲಿ ಸಾರ್ವಜನಿಕ ವಲಯದಲ್ಲಿ ಮತ್ತು ವಕೀಲ ವೃಂದದಲ್ಲಿ ಕೂಡ ಗಂಭೀರವಾದ ಚರ್ಚೆಗಳು ನಡೆಯುತ್ತಿವೆ ಎಂಬ ವಿಷಯ ನೈಜ್ಯ ಹೋರಾಟಗಾರರ ವೇದಿಕೆ ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ನ್ಯಾಯಮೂರ್ತಿಗಳ ಹತ್ತಿರದ ಸಂಬಂಧಿಗಳು ಮತ್ತು ರಕ್ತ ಸಂಬಂಧದಲ್ಲಿರುವ ವಕೀಲರುಗಳು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಮತ್ತು ಕೆಳಹಂತದ ನ್ಯಾಯಾಲಯದಲ್ಲಿ ವಕೀಲಿ ವೃತ್ತಿಯನ್ನು ನಡೆಸುತ್ತಿರುವುದಾರ ಬಗ್ಗೆ ಮಾಹಿತಿಗಳನ್ನು ಪಡೆದು ಅಂತಹ ಗೌರವಾನ್ವಿತ ನ್ಯಾಯಮೂರ್ತಿಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಇತರ ರಾಜ್ಯಗಳ ಉಚ್ಚ ನ್ಯಾಯಾಲಯಗಳಿಗೆ ವರ್ಗಾವಣೆ ಮಾಡಬೇಕೆಂದು ಮುಖ್ಯ ನ್ಯಾಯಮೂರ್ತಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿಯ ಜಾಮಾ ಮಸೀದಿಯಲ್ಲಿ ಮುಸ್ಲಿಮರಿಗೆ ಪ್ರತಿದಿನ ಇಫ್ತಾರ್ ಆಯೋಜಿಸುತ್ತಿರುವ ಹಿಂದೂ ಯುವತಿ ನೇಹಾ ಭಾರ್ತಿ

ಇತ್ತೀಚೆಗೆ ದೆಹಲಿಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಯಶವಂತ ವರ್ಮಾರವರ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿದ್ದು ಬಹಿರಂಗಗೊಳ್ಳುತ್ತಿದ್ದಂತೆ ನ್ಯಾಯಾಂಗದ ಬಗ್ಗೆ ದೇಶದ ನಾಗರಿಕರು ಕಳವಳಗೊಂಡಿದ್ದು ಮತ್ತು ತಲ್ಲಣಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಯೊಬ್ಬರೂ ಚರ್ಚೆಯಲ್ಲಿ ತೊಡಗಿರುವುದು ನ್ಯಾಯಾಂಗದ ಬಗ್ಗೆ ದೇಶದ ನಾಗರಿಕರು ಇಟ್ಟಿರುವ ವಿಶ್ವಾಸ, ನಂಬಿಕೆ , ಮತ್ತು ಗೌರವವನ್ನು ಪ್ರಶ್ನಿಸುವಂಥಾಗಿದೆ. ಈ ಹಿನ್ನೆಲೆಯಲ್ಲಿ ಈ ವಿಷಯವನ್ನು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಸ್ತಾಪಿಸಿ ಗಮನ ಸೆಳೆಯುವುದು ನಮಗೆ ಅನಿವಾರ್ಯವಾಗಿದೆ. ಇದರಿಂದ ರಾಜ್ಯದ ನಾಗರಿಕರಿಗೆ ನ್ಯಾಯಾಂಗದಲ್ಲಿ ಪಾರದರ್ಶಕತೆ, ನಂಬಿಕೆ, ವಿಶ್ವಾಸ ಇನ್ನಷ್ಟು ಗಟ್ಟಿಯಾಗಿ ದೃಢವಾಗುವುದರಲ್ಲಿ ಸಂಶಯವಿಲ್ಲ ಎಂದು ನೈಜ ಹೋರಾಟಗಾರರ ವೇದಿಕೆ ಮನವಿಯಲ್ಲಿ ಉಲ್ಲೇಖಿಸಿದೆ.

ನ್ಯಾಯಾಂಗದ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ನೈಜ ಹೋರಾಟಗಾರರ ವೇದಿಕೆಯು ಸಮಾಜಮುಖಿ ಕೆಲಸಗಳ ಜೊತೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮತ್ತು ಸಾರ್ವಜನಿಕ ಹಿತಾಸಕ್ತಿಯ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಮಗೆ ಬಂದ ಮಾಹಿತಿಗಳ ಆಧಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗೌರವಾನ್ವಿತ ನ್ಯಾಯಮೂರ್ತಿಗಳ ರಕ್ತ ಸಂಬಂಧಿಗಳು ಮತ್ತು ಹತ್ತಿರದ ಸಂಬಂಧಿಗಳು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕೆಳಹಂತದ ಸಿವಿಲ್ ನ್ಯಾಯಾಲಯ, ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಲ್ಲಿ ವಕೀಲಿ ವೃತ್ತಿಯನ್ನು ನಡೆಸುತ್ತಿರುವುದರಿಂದ ಸಾರ್ವಜನಿಕರಲ್ಲಿ ನ್ಯಾಯಾಂಗದ ಬಗ್ಗೆ ಅನುಮಾನದ ಹುತ್ತ ಬೆಳೆದು ನಿಂತಿದೆ. ಇದನ್ನು ಪರಿಹರಿಸಲು ತಾವು ಶ್ರಮವಹಿಸಿ ಮತ್ತು ಜನರಲ್ಲಿ ನ್ಯಾಯಾಂಗದ ಬಗ್ಗೆ ವಿಶ್ವಾಸವನ್ನು ಮತ್ತು ನಂಬಿಕೆಯನ್ನು ಹಾಗೂ ಗೌರವವನ್ನು ಹೆಚ್ಚಿಸುವಲ್ಲಿ ತಾವು ಮುಖ್ಯಪಾತ್ರ ವಹಿಸಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿಯವರಿಗೆ ದೂರು ಸಲ್ಲಿಸಿರುವ ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ ವೆಂಕಟೇಶ್ ಹಾಗೂ ಬಿ.ಎಸ್ ಲೋಕೇಶ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...