ದೇಶಕ್ಕಾಗಿ ಆರ್‌ಎಸ್‌ಎಸ್‌ನ ಕನಿಷ್ಠ 10 ಕೊಡುಗೆ ಹೇಳಿ: ಜಗದೀಶ ಶೆಟ್ಟರ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

Date:

ಈ ದೇಶದ ಏಳಿಗೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ನೀಡಿದ ಕನಿಷ್ಠ ಹತ್ತು ಕೊಡುಗೆಗಳನ್ನು ಸಂಸದ ಜಗದೀಶ ಶೆಟ್ಟರ್ ಅವರು ತಿಳಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಜಗದೀಶ ಶೆಟ್ಟರ್ ಅವರು ಇತ್ತೀಚೆಗೆ ಹೇಳಿದ್ದ ಆರ್‌ಎಸ್‌ಎಸ್ ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರ ಆಗುತ್ತಿತ್ತು ಎಂಬ ಹೇಳಿಕೆಗೆ ಪ್ರಿಯಾಂಕ್ ತಿರುಗೇಟು ನೀಡಿದ್ದಾರೆ. ಈ ಕುರಿತ ಪೋಸ್ಟ್‌ ಅನ್ನು ಎಕ್ಸ್‌ನಲ್ಲಿ ಹಂಚಿದ್ದಾರೆ.

ಶೆಟ್ಟರ್ ಅವರೇ, ಆರ್‌ಎಸ್‌ಎಸ್‌ ಅಸ್ತಿತ್ವಕ್ಕೆ ಬಂದಿದ್ದು ನೂರು ವರ್ಷಗಳ ಹಿಂದೆ. ಆದರೆ ಸಾವಿರಾರು ವರ್ಷಗಳಿಂದ ‘ಹಿಂದೂ’ ಎಂದು ಗುರುತಿಸಿಕೊಂಡಿರುವ ಧರ್ಮಾಚರಣೆ ಅಸ್ತಿತ್ವದಲ್ಲಿದೆ. ಈ ಸತ್ಯ ನಿಮಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್ ಹೊಗಳುವುದು ಅನಿವಾರ್ಯವಾಗಿದೆ. ಆರ್‌ಎಸ್‌ಎಸ್ ಅವರಿಗಂತೂ ಬಸವಣ್ಣನವರ ತತ್ವದಲ್ಲಿ ನಂಬಿಕೆ ಇಲ್ಲ. ತಮಗೂ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಿಜವಾಗಿಯೂ ಬಸವ ತತ್ವದಲ್ಲಿ ನಂಬಿಕೆ ಇರುವವರು ಆರ್‌ಎಸ್‌ಎಸ್‌ ಅನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಹಿಂದೆ, ಇಂದು, ಎಂದಿಗೂ ಈ ಭಾರತ ಜಾತ್ಯತೀತ ತತ್ವಗಳ ನೆಲವಾಗಿದೆ, ಮುಂದೆಯೂ ಜಾತ್ಯತೀತ ನೆಲವಾಗಿಯೇ ಇರಲಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...