ನ್ಯಾಷನಲ್ ಹೆರಾಲ್ಡ್ ಪ್ರಕರಣ | ಮೋದಿ ಸರ್ಕಾರಕ್ಕೆ ದೆಹಲಿ‌ ಕೋರ್ಟ್‌ ಕಪಾಳಮೋಕ್ಷ: ಬಿ ಕೆ ಹರಿಪ್ರಸಾದ್‌

Date:

ಗಾಂಧಿ ಕುಟುಂಬವನ್ನು ರಾಜಕೀಯವಾಗಿ ಎದುರಿಸಲಾಗದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಳ್ಳು ಖಾಸಗಿ ದೂರನ್ನು ದಾಖಲಿಸಿ ತನಿಖಾ ಸಂಸ್ಥೆಗಳ ದುರಪಯೋಗ ಮಾಡಿಕೊಂಡಿರುವುದಕ್ಕೆ ದೆಹಲಿ‌ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ್‌ ಕುಟುಕಿದ್ದಾರೆ.

ಈ ಕುರಿತು‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ್ದು ಮಾತ್ರವಲ್ಲ, ಚಾರ್ಜ್ ಶಿಟ್ ಅನ್ನೇ ಸಂಪೂರ್ಣವಾಗಿ ತಿರಸ್ಕರಿಸಿದೆ” ಎಂದಿದ್ದಾರೆ.

“ಗಾಂಧಿ ಕುಟುಂಬದ ಮೇಲೆ “ಮೋ-ಶಾ” ಜೋಡಿ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಮಾಡಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯವೇ ತಕ್ಕ ಉತ್ತರ ಕೊಟ್ಟಿದೆ. ಬೆದರಿಕೆ, ಕಿರುಕುಳ, ಸೇಡಿನ ಅತ್ಯಂತ ಹೀನ ರಾಜಕಾರಣ ಮಾಡಿದ ಮೋ-ಶಾ ಜೋಡಿಗೆ ಇದೇ ಪ್ರಕರಣದಲ್ಲಿ ಕೋರ್ಟ್ ನೀಡಿರುವ ಒಂದೊಂದು ಹೇಳಿಕೆಗಳು ಕಪಾಳಮೋಕ್ಷವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವತಂತ್ರ ಚಳುವಳಿಯಲ್ಲಿ‌ ಮಹತ್ತರ ಪಾತ್ರವಹಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಆಧಾರ ರಹಿತ ಆರೋಪ ಮಾಡಿರುವ ಬಿಜೆಪಿ ಪಕ್ಷ ಮತ್ತು ನರೇಂದ್ರ‌ ಮೋದಿ ಸರ್ಕಾರ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಸೇಡಿನ ರಾಜಕೀಯವನ್ನು ಮುಂದುವರೆಸುತ್ತಲೇ ಬರುತ್ತಿರುವ ಮೋ-ಶಾಗಳಿಗೆ ನ್ಯಾಯಲಯ ಪಾಠ ಕಲಿಸಿದೆ, ಮುಂದೆ ಜನರೇ ತಕ್ಕ ಶಾಸ್ತಿ ಮಾಡಲಿದ್ದಾರೆ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...