ನ್ಯಾಷನಲ್ ಹೆರಾಲ್ಡ್ ಪ್ರಕರಣ | ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿ ಕೆ ಶಿವಕುಮಾರ್

Date:

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ” ಎಂದು ತಿಳಿಸಿದರು.

“ಪೊಲೀಸರು ನೀಡಿರುವ ನೋಟಿಸ್‌ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ ಸಿ ವೇಣುಗೋಪಾಲ್ ಮತ್ತು ಸುರ್ಜೆವಾಲಾ ಅವರನ್ನು ಭೇಟಿಯಾಗಿರುವ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲಾ ಅವರನ್ನು, ಮಲ್ಲಿಕಾರ್ಜುನ ಖರ್ಗೆ ಅವರನ್ನು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ” ಎಂದು ತಿಳಿಸಿದರು.

ವೈಯಕ್ತಿಕವಾಗಿ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು” ಎಂದರು.

ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದಲ್ಲಿ ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...