ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿ ಮೋದಿಗೆ ಬಿಜೆಪಿ ಶಾಸಕ ಯತ್ನಾಳ್‌ ಪತ್ರ

Date:

ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಪ್ರಧಾನಿ ನರೇಂದ್ರ ಮೊದಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್‌ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಪತ್ರ ಬರೆದಿದ್ದೇನೆ. ದೇಶದ ಎಲ್ಲ ಪ್ರಜೆಗಳಿಗೂ ಭೂಮಿಯ ಮೇಲೆ ಸಮಾನ ಹಕ್ಕಿದೆ. ವಕ್ಫ್‌ನ ಉದ್ದೇಶವು ಕಲ್ಯಾಣ ಮತ್ತು ಸಮಾಜ ಸೇವೆಯಾಗಿದ್ದರೆ, ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು
ಮಾಡಬೇಕಾಗಿದೆ. ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ. ಆದ್ದರಿಂದ, ಅದನ್ನು ಸದ್ಬಳಕೆ ಮಾಡುವ ಸದುದ್ದೇಶದಿಂದ ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಸಂಸದ ತೇಜಸ್ವಿ ಸೂರ್ಯ ಅವರು ವಿಜಯಪುರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ರೈತರ ಜಮೀನನ್ನು ವಕ್ಫ್ ಆಸ್ತಿಗೆ ಸೇರಿಸಲು ಬಂದಿರುವ ನೋಟಿಸ್‌ಗಳ ಕುರಿತು ವಕ್ಫ್ ತಿದ್ದುಪಡಿ ವಿಧೇಯಕದ ಜಂಟಿ ಸದನ ಸಮಿತಿ ಮುಖ್ಯಸ್ಥ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದರು.

‘ನೋಟಿಸ್‌ಗಳ ಹೊರತಾಗಿಯೂ ಹಲವರ ಆರ್‌ಟಿಸಿ, ಪಹಣಿಗಳಲ್ಲಿಯೂ ಯಾವುದೇ ಸಮರ್ಪಕ ಕಾನೂನುಗಳನ್ನು ಪಾಲಿಸದೇ ವಕ್ಫ್ ಆಸ್ತಿಗಳೆಂದು ತಿದ್ದುಪಡಿ ಮಾಡಲಾಗಿದ್ದು, ಈ ರೀತಿ ತೊಂದರೆಗೆ ಒಳಗಾಗಿರುವ ರೈತರ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಬೇಕು. ಇದರಿಂದ ವಕ್ಫ್‌ನಿಂದ ಆಗಿರುವ ಭೂಮಿ ಅತಿಕ್ರಮಣದ ನೇರಮಾಹಿತಿ ದೊರಕಲಿದೆ’ ಎಂದು ಮನವಿ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...