ಗುರುವಾರದಿಂದ ನವರಾತ್ರಿ ಆರಂಭ; ಶಾಲೆಗಳಿಗೆ 17 ದಿನ ದಸರಾ ರಜೆ

Date:

ಗುರುವಾರದಿಂದ (ಅಕ್ಟೊಬರ್ 3) ರಾಜ್ಯದ ಎಲ್ಲ ಶಾಲಾಗಳಿಗೆ ದಸರಾ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಕ್ಟೋಬರ್ 20ರವರೆಗೆ ಅಂದರೆ, 17 ದಿನಗಳ ಕಾಲ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ದಸರಾ ರಜೆ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. “2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿವೆ” ಎಂದು ಹೇಳಿದೆ. ಅಲ್ಲದೆ, ಅಕ್ಟೋಬ‌ರ್ 21ರಿಂದ ತರಗತಿಗಳು ಪುನರಾರಂಭವಾಗಲಿವೆ ಎಂದೂ ವಿವರಿಸಿದೆ.

ಅಕ್ಟೋಬರ್ 3ರಿಂದ ನವರಾತ್ರಿ ಆರಂಭವಾಗಲಿದ್ದು, ಅಕ್ಟೋಬರ್ 12ರಂದು ವಿಜಯದಶಮಿ ನಡೆಯಲಿದೆ. ಮೈಸೂರು, ಕೊಡಗು, ಮಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ದಸರಾ ಆಚರಣೆ ನಡೆಯಲಿದೆ. ಇದೇ ಅವಧಿಯಲ್ಲಿ ಪ್ರತಿವರ್ಷ ಶಾಲೆಗಳಿಗೆ ರಜೆ ಘೋಷಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...