ದೇಶದ ಆರ್ಥಿಕ ಸಬಲತೆ, ಆಹಾರ ಸ್ವಾವಲಂಬನೆಗೆ ನೆಹರು ಕಾರಣ: ಸಿಎಂ ಸಿದ್ದರಾಮಯ್ಯ

Date:

ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಮೇ 27) ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನಿ ದಿ.ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

“ನೆಹರು ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೆಹರು ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದರು. ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು ಎಂದರು. ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಹಾಕಿರದೇ ಹೋಗಿದ್ದರೆ ಇಂದಿನ ಭಾರತ ಇರುತ್ತಿರಲಿಲ್ಲ. ಆರ್ಥಿಕತೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದ್ದರೆ ಅದಕ್ಕೆ ನೆಹರು ಅವರೇ ಕಾರಣ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಭಾರ | ದಿಟ್ಟಿಸುತ್ತಿದೆ ಮುಂಗಾರು- ಕೊಚ್ಚಿ ಹೋಗದಿರಲಿ ಬಣ್ಣಬಣ್ಣದ ಸಾಧನೆಗಳ ತೇರು!

ಕೋವಿಡ್: ಎಲ್ಲರಿಗೂ ಮಾಸ್ಕ್ ಕಡ್ಡಾಯವಲ್ಲ

“ಕೋವಿಡ್ ಸಂಬಂಧಿಸಿದಂತೆ ನಿನ್ನೆ ನಡೆದ ಸಭೆಯಲ್ಲಿ ಮುನ್ನೆಚ್ಚರಿಕಾ ಬಗ್ಗೆ ಚರ್ಚಿಸಲಾಗಿದೆ. ನಾವು ಎಲ್ಲದ್ದಕ್ಕೂ ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು. ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು” ಎಂದು ಸೂಚಿಸಲಾಗಿದೆ ಎಂದರು.

“ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ.ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಸೂಚನೆ ಬಂದಿಲ್ಲ. ಆದರೆ ಎಚ್ಚರಿಕೆ ವಹಿಸಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...