ಪ್ರತೀ ಗ್ರಾಮದಲ್ಲಿ ಶಾಲೆ, ಗ್ರಾಮ ಪಂಚಾಯ್ತಿ, ಸಹಕಾರ ಸಂಘ ಅತ್ಯಗತ್ಯ ಎಂಬುದು ನೆಹರೂ ಆಶಯ: ಸಿಎಂ

Date:

ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

“ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ. ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್‌ಗೆ 5 ರೂ. ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ. ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲ ಜಾತಿ, ಎಲ್ಲ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲ ಜಾತಿಯ, ಎಲ್ಲ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ” ಎಂದರು.

“ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ” ಎಂದರು.

ನನಗೆ ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ

“ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ. ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ” ಎಂದು ಹೇಳಿದರು.

“ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...