ರಾಜ್ಯದಲ್ಲಿ ಆನ್​ಲೈನ್​ ಬೆಟ್ಟಿಂಗ್, ಗೇಮಿಂಗ್ ಆ್ಯಪ್​​ಗೆ ಕಡಿವಾಣ: ಶೀಘ್ರವೇ ಹೊಸ ಮಾನದಂಡ

Date:

ರಾಜ್ಯದಲ್ಲಿ ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಯ ಹಾವಳಿ ಹೆಚ್ಚುತ್ತಿದೆ. ನಗರ ಪ್ರದೇಶಗಳಿಂದ ಗ್ರಾಮೀಣ ಭಾಗಕ್ಕೂ ಹರಡುತ್ತಿದೆ. ಇವುಗಳಿಗೆ ಕಡಿವಾಣ ಹಾಕಲು ಶೀಘ್ರವೇ ಹೊಸ ಮಾನದಂಡಗಳನ್ನು ರೂಪಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್​ಅನ್ನು ತಡೆಯುವ ಕುರಿತು ಸರ್ಕಾರದಲ್ಲಿ ಚರ್ಚೆ ನಡೆದಿದೆ. ಈ ದಂಧೆಗಳನ್ನು ತಡೆಯಲು ಹಲವು ಕಾಯ್ದೆಗಳಿವೆ. ಆದಾಗ್ಯೂ, ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ದಂಧೆಗಳಿಂದ ಜನರನ್ನು ರಕ್ಷಿಸುವ ಬಗ್ಗೆ ಚರ್ಚಿಸುತ್ತಿದ್ದೇವೆ. ಹೊಸ ಮಾನದಂಡಗಳನ್ನು ರೂಪಿಸುತ್ತೇವೆ” ಎಂದು ಹೇಳಿದ್ದಾರೆ.

“ಗೇಮಿಂಗ್ ಆ್ಯಪ್​ಗಳಿಗೆ ಕಡಿವಾಣ ಹಾಕುವುದು ರಾಜ್ಯ ಸರ್ಕಾರಕ್ಕೆ ಸವಾಲಿನ ಕೆಲಸ. ಇವುಗಳಿಗೆ ಕಡಿವಾಣ ಹಾಕುವ ಬಗ್ಗೆ ಗೇಮಿಂಗ್ ಇಂಡಸ್ಟ್ರಿ, ಗೃಹ ಇಲಾಖೆ ಹಾಗೂ ಸಾರ್ವಜನಿಕರು ಮತ್ತು ಕಾನೂನು ಇಲಾಖೆಯ ಸಲಹೆ ಪಡೆದು ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...