ಮುಂದಿನ 2 ದಿನ ರಾಜ್ಯದ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Date:

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ, ಹವಾಮಾನ ಇಲಾಖೆ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್​’ ಘೋಷಿಸಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ. ಜನವರಿ 5, 6 ರಂದು ಭಾರೀ ಮಳೆಯಾಗುವ ಸಂಭವ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಜನವರಿ 5ರಂದು ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರಿನಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಎಲ್ಲೆಲ್ಲಿ ಮಳೆಯಾಗಲಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ರಾಜ್ಯದಾದ್ಯಂತ ಮುಂದಿನ 4 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಉಷ್ಣಾಂಶ ಕುಸಿತವಾಗಿ ಶೀತದ ವಾತಾವರಣ ಇರಲಿದೆ. ಹಾಸನ ಸೇರಿದಂತೆ ರಾಜ್ಯದ ಹಲವು ಕಡೆ ಗುರುವಾರ ಮಳೆಯಾಗಿದೆ.

ವಿಜಯಪುರದಲ್ಲಿ 13.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಕೆಲವು ಕಡೆಗಳಲ್ಲಿ ಶುಕ್ರವಾರ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಹೊಸ ತಲೆಮಾರಿಗೆ ಹಳೆಯ ನೆನಪು 6 | ಮತ್ತೆ ಪುಟಿದೆದ್ದ ಜೆಪಿನಗರ 7ನೇ ಹಂತದ ಪುಟ್ಟೇನಹಳ್ಳಿ ಪ್ರಾಚೀನ ಕೆರೆ

ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮೋಡ ಕವಿದ ವಾತಾವರಣವಿರುವುದರಿಂದ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದ್ದು, ಕನಿಷ್ಠ ತಾಪಮಾನ 1-2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಗಾಳಿ ವೇಗ ತೀವ್ರವಾಗಿರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...