ಚನ್ನಪಟ್ಟಣದಲ್ಲಿ ನಿಖಿಲ್, ಶಿಗ್ಗಾಂವಿಯಲ್ಲಿ‌ ಭರತ್‌ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಕೆ

Date:

ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಚನ್ನಪಟ್ಟಣದಲ್ಲಿ ಬಹೃತ್‌ ಮೆರವಣಿಗೆ ಮೂಲಕ ಸಾಗಿಬಂದು ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಿಖಿಲ್ ಕುಮಾರಸ್ವಾಮಿ‌ ನಾಮಪತ್ರ ಸಲ್ಲಿಸುವಾಗ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಸಂಸದ ರಾಘವೇಂದ್ರ, ವಿಪಕ್ಷ ನಾಯಕ ಆರ್‌ ಅಶೋಕ್‌, ಸಂಸದ ಯಧುವೀರ್‌ ಒಡೆಯರ್‌, ನಿಖಿಲ್‌ ಪತ್ನಿ ರೇವತಿ ಮೆರವಣಿಗೆಯಲ್ಲಿ ಸಾಥ್‌ ನೀಡಿದರು.

ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನ ಬೆಂಗಳೂರಿನ ಜೆಪಿ ನಗರದ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಹೆಚ್‌ ಡಿ ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಅವರು ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಜೆ.ಪಿ ನಗರದ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಿಜೆಪಿ 24

ಭರತ್ ಬೊಮ್ಮಾಯಿ ರೋಡ್‌ ಶೋ

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ರೋಡ್ ಶೋ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಸಿ.ಸಿ. ಪಾಟೀಲ್, ಮುರುಗೇಶ ನಿರಾಣಿ, ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಸಂಸದ ಬಸವರಾಜ ಬೊಮ್ಮಾಯಿ ಅವರು ಸವಣೂರು ತಾಲೂಕಿನ ಕಾರಡಗಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಹಾಗೆಯೇ ಶಿಗ್ಗಾಂವಿ ತಾಲೂಕಿನ ತಡಸ್ ಕ್ರಾಸ್ ಬಳಿ ಇರುವ ಗಾಯತ್ರಿ ತಪೊಭೂಮಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...