ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ, ಫೆ.18ರಂದು ಹೋರಾಟ: ಟಿ ಎ ನಾರಾಯಣಗೌಡ

Date:

ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ‌ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ತಿಳಿಸಿದ್ದಾರೆ.

ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ‌. ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಾನುವಾದದ ಸಮಸ್ಯೆ ಕಂಡುಬಂದಿದ್ದರಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡಿತ್ತು. ನಮ್ಮ ಚಳವಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮರುಪರೀಕ್ಷೆಗೆ ಆದೇಶಿಸಿದ್ದರು. ಆದರೆ ಮರುಪರೀಕ್ಷೆಯಲ್ಲೂ ಕನ್ನಡಾನುವಾದದ ಸಮಸ್ಯೆ ಉಂಟಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಹೋರಾಟದ ಸಂದರ್ಭದಲ್ಲಿ ನಾವು ಕನ್ನಡದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಅದನ್ನು ಇಂಗ್ಲಿಷ್ ಗೆ ಅನುವಾದಿಸುವಂತೆ ಆಗ್ರಹಿಸಿದ್ದೆವು. ಕರ್ನಾಟಕದ ಆಡಳಿತ ಭಾಷೆ ಕನ್ನಡವಾದ್ದರಿಂದ ಇದೇ ಸಹಜವಾಗಿ ನಡೆಯಬೇಕಿತ್ತು. ಆದರೆ ದುರಂಹಕಾರಿ ಅಧಿಕಾರಿಗಳಿಂದಾಗಿ ಮತ್ತೆ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ, ಕನ್ನಡಕ್ಕೆ ತಪ್ಪುತಪ್ಪಾಗಿ ಅನುವಾದಿಸಲಾಗಿದೆ. ಇದರಿಂದಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವಂಚನೆ ಎಸಗಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಫಲಿತಾಂಶದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ತೀರಾ ಕನಿಷ್ಟ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ ಎಂಬ ಮಾಹಿತಿ ಇದೆ. ಇದಕ್ಕೆ ಕೆಟ್ಟದಾಗಿ ಸಿದ್ಧಪಡಿಸಿದ ಕನ್ನಡಾನುವಾದದ ಪ್ರಶ್ನೆ ಪತ್ರಿಕೆಗಳೇ ಕಾರಣ ಎಂದು‌ ಕನ್ನಡ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಇವರೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಸಾಮಾಜಿಕವಾಗಿ ಹಿಂದುಳಿದ ಜನವರ್ಗಗಳಿಂದ ಬಂದವರು. ಇಂಥವರಿಗೆ ಅನ್ಯಾಯವಾಗುತ್ತಿದ್ದರೂ ಸರ್ಕಾರ ಮೌನವಾಗಿ ಕುಳಿತುಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಹಲವಾರು ವಿದ್ಯಾರ್ಥಿಗಳು ಪ್ರತಿನಿತ್ಯ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಅವರ ಸಂಕಟಗಳನ್ನು ಹೇಳುತ್ತಿದ್ದಾರೆ. ಅವರ ಭವಿಷ್ಯದ ಬದುಕು ಬೀದಿಗೆ ಬಿದ್ದಂತಾಗಿದೆ. ಎಷ್ಟೋ ವರ್ಷಗಳಿಂದ ಅವರು ಈ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದರು. ಇದಕ್ಕಾಗಿ ಅವರ ಪೋಷಕರೂ ತ್ಯಾಗ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಅನುತ್ತೀರ್ಣಗೊಂಡರೆ ಬಹುತೇಕರು ವಯೋಮಿತಿಯ ಕಾರಣಕ್ಕೆ ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಯಾರೋ ದುಷ್ಟ ಅಧಿಕಾರಿಗಳು ಮಾಡಿದ ದ್ರೋಹಕ್ಕೆ ಅವರ ಬದುಕು ನರಕವಾಗಿದೆ ಎಂದು ಕಿಡಿಕಾರಿದ್ದಾರೆ.

ಪರೀಕ್ಷೆ ಬರೆದವರಿಗೆಲ್ಲ ಕೆಎಎಸ್ ಹುದ್ದೆಯೇನು ಲಭಿಸುವುದಿಲ್ಲ. ಆದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳನ್ನು ಬೇಕೆಂದೇ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ಕೊಟ್ಟು ಅಂಕಗಳಿಸಿದಂತೆ ತಡೆಯಲಾಯಿತು ಎಂಬ ಅನ್ಯಾಯ ಪ್ರಜ್ಞೆ ಅವರನ್ನು ಕೊನೆಯವರೆಗೂ ಬಾಧಿಸಲಿದೆ. ಅಧಿಕಾರಿಗಳಾಗುವ ನಮ್ಮ ಆಸೆಗೆ ರಾಜ್ಯ ಸರ್ಕಾರವೇ ತಣ್ಣೀರೆರಚಿತು, ನಮಗೆ ಮೋಸ ಮಾಡಿತು ಎಂದು ಅವರು ಭಾವಿಸುತ್ತಾರೆ. ಇದು ಬೇಕಾಗಿರಲಿಲ್ಲ. ಇದಕ್ಕೆ ನೇರವಾಗಿ ಕೆಪಿಎಸ್ ಸಿ ಮತ್ತು ರಾಜ್ಯ ಸರ್ಕಾರವೇ ಹೊಣೆ. ಇದನ್ನು ಸರಿಪಡಿಸುವ ಜವಾಬ್ದಾರಿಯನ್ನೂ ಸರ್ಕಾರವೇ ಹೊರಬೇಕಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಿಂದೆ ಮಾಡಿದಂತೆ ಕೂಡಲೇ ಮಧ್ಯೆ ಪ್ರವೇಶಿಸಿ ಕೂಡಲೇ ಫಲಿತಾಂಶವನ್ನು ತಡೆಹಿಡಿಯಬೇಕು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಪರಿಹಾರ ಸೂತ್ರವನ್ನು ರೂಪಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು. ಫೆ. 18ರಂದು ನಡೆಯುವ ಸಾಂಕೇತಿಕ ಪ್ರತಿಭಟನೆಯಲ್ಲೇ ಹತ್ತಾರು ಸಾವಿರ ಮಂದಿ ನೆರೆಯುತ್ತಿದ್ದಾರೆ. ಅನ್ಯಾಯ ಸರಿಪಡಿಸದೇ ಹೋದಲ್ಲಿ ಅದರ ಪರಿಣಾಮ ಗಂಭೀರವಾಗಿರುತ್ತದೆ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...