ಬಸ್‌ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Date:

  • ಪ್ರಯಾಣ ದರ ಹೆಚ್ಚಳ ಕುರಿತು ಆಯೋಗ ರಚಿಸಲು ವರದಿ
  • ನಿತ್ಯ ಸರ್ಕಾರಿ ಬಸ್‌ಗಳಲ್ಲಿ 1.20 ಕೋಟಿ ಜನರು ಪ್ರಯಾಣ

ರಾಜ್ಯದಲ್ಲಿ ಸಾರಿಗೆ ಪ್ರಯಾಣ ದರ ಹೆಚ್ಚಳ ಕುರಿತಂತೆ ಆಯೋಗ ರಚನೆಗಾಗಿ ಮಾಜಿ ಐಎಎಸ್‌ ಅಧಿಕಾರಿ ಶ್ರೀನಿವಾಸ್‌ ಮೂರ್ತಿ ಅವರು ನಾಲ್ಕು ನಿಗಮಗಳಿಗೆ ಸೇರಿದಂತೆ 150 ಪುಟಗಳ ವರದಿ ನೀಡಿದ್ದಾರೆ. ಆದರೆ, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಮಂದೂಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಸಂತೆ ಮೈದಾನದ ಹಿಂಭಾಗದಲ್ಲಿರುವ ಬಿಎಂಟಿಸಿ ಬಸ್‌ ಡಿಪೊಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “ಪ್ರತಿನಿತ್ಯ ಸರ್ಕಾರಿ ಬಸ್‌ಗಳನ್ನು 1.20 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ. ಆಯೋಗ ರಚನೆ ಮಾಡಿದರೆ ಪ್ರಯಾಣ ದರ ಹೆಚ್ಚು ಮಾಡಬೇಕಾಗುತ್ತದೆ” ಎಂದರು.

“ಪ್ರತಿ ವರ್ಷ ಕೃಷಿ, ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ಸರ್ಕಾರ ಖರ್ಚು ಮಾಡುತ್ತದೆ. ಅದೇ ರೀತಿ ಸಾರಿಗೆಗೂ ವ್ಯಯ ಮಾಡುತ್ತೇವೆ. ಪ್ರಯಾಣ ದರವನ್ನು ಹೆಚ್ಚಳ ಮಾಡುವುದರಿಂದ ಶ್ರೀಸಾಮಾನ್ಯರಿಗೆ ತೊಂದರೆಯಾಗುತ್ತದೆ. ರಾಜ್ಯ ಸಾರಿಗೆ ಸಂಸ್ಥೆಯೂ ಸೇವಾ ಮನೋಭಾವದಿಂದ ನಡೆಯುತ್ತಿದ್ದು, ಲಾಭದ ಉದ್ದೇಶವಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಗನಿಗೆ ಸಾರಾಯಿ ಕುಡಿಸಿದ ಹಾಗೆ ಯತ್ನಾಳ್‌ ಮಾತು: ಮುರುಗೇಶ್ ನಿರಾಣಿ ಕಿಡಿ

“ಬರ ಇರುವುದರಿಂದ ಈ ಬಾರಿ ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿಲ್ಲ” ಎಂದು ತಿಳಿಸಿದರು.

“ಯಾವ ಮಾಹಿತಿ ಆಧಾರದಲ್ಲಿ ಶಾಮನೂರು ಶಿವಶಂಕರಪ್ಪ ಜಾತಿ ಗಣತಿ ವರದಿ ಬಗ್ಗೆ ಪ್ರತಿಕ್ರಿಯಿಸಿದ್ದಾರೋ ಗೊತ್ತಿಲ್ಲ. ಈವರೆಗೂ ಜಾತಿ ಗಣತಿಯ ವರದಿ ರಾಜ್ಯ ಸರ್ಕಾರ ಮಂಡನೆ ಮಾಡಿಲ್ಲ. ವರದಿಯಲ್ಲಿ ಏನಿದೆ ಎಂಬುದು ನನಗೆ ತಿಳಿದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...