ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರು ತೃಪ್ತಿಕರ: ರಾಜ್ಯಕ್ಕೆ ಹೊಸ ಆದೇಶ ನೀಡದ ನಿರ್ವಹಣಾ ಪ್ರಾಧಿಕಾರ

Date:

ತಮಿಳುನಾಡಿಗೆ ಕರ್ನಾಟಕವು ಹರಿಸುತ್ತಿರುವ ಕಾವೇರಿ ನೀರು ಹರಿಸುತ್ತಿರುವ ಪ್ರಮಾಣ ತೃಪ್ತಿಕರ ಎಂದು ಅಭಿಪ್ರಾಯಪಟ್ಟಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ,ಹೊಸ ಆದೇಶ ನೀಡಲು ನಿರಾಕರಿಸಿದೆ.

ಪ್ರಾಧಿಕಾರದ 32ನೇ ಸಭೆ ನವದೆಹಲಿಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಗಳು ವಾದ ಮಂಡಿಸಿ, ‘ಜೂನ್‌ನಿಂದ ಜುಲೈ 22ರವರೆಗೆ ರಾಜ್ಯದ ನಾಲ್ಕು ಜಲಾಶಯಗಳಲ್ಲಿ ಸಂಚಿತ ಒಳಹರಿವು 118 ಟಿಎಂಸಿ ಇದೆ. ಆದರೆ, ಇದೇ ಅವಧಿಯಲ್ಲಿ 30 ವರ್ಷಗಳ ಸರಾಸರಿ (1989-90 ರಿಂದ 2018-19) ಒಳಹರಿವು 98.679 ಟಿಎಂಸಿ’ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಜುಲೈ 11ರಂದು ಶಿಫಾರಸು ಮಾಡಿತ್ತು. ನಾಲ್ಕು ಜಲಾಶಯಗಳ ಕೇವಲ ಶೇ 15.72 ವಿಸ್ತೀರ್ಣ ಪರಿಗಣಿಸಿ ಸಮಿತಿ ಈ ಸೂಚನೆ ನೀಡಿತ್ತು. ಜೂನ್‌ನಿಂದ ಜುಲೈ 12ರವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ, ತಮಿಳುನಾಡಿನ ನದಿ ಮುಖಜ ಭೂಮಿಯಲ್ಲಿ ಉತ್ತಮ ಮಳೆಯಾಗಿತ್ತು. ತಮಿಳುನಾಡಿನ ಮೂರು ಜಲಾಶಯಗಳ ಜಲವರ್ಷದ ಅಂತ್ಯಕ್ಕೆ ಕ್ಯಾರಿ ಓವರ್ ಸಂಗ್ರಹ ಮತ್ತು ಜಲಾನಯನ ಪ್ರದೇಶದ ಜಲ ವಿಜ್ಞಾನ ಪರಿಸ್ಥಿತಿ ಪರಿಣಿಸಿ ಪ್ರಾಧಿಕಾರ ಹಾಗೂ ಸಮಿತಿ ಆದೇಶ ನೀಡಬೇಕು’ ಎಂದು ಆಗ್ರಹಿಸಿದರು.

ಕಾವೇರಿ ಜಲವಿವಾದ ನ್ಯಾಯಮಂಡಳಿಯ ಆದೇಶದ ಪ್ರಕಾರ ಕರ್ನಾಟಕವು ತಮಿಳುನಾಡಿಗೆ ನೀರು ಬಿಡದ ಕಾರಣ ಕುರುವೈ ಬೆಳೆಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಹಾಗಾಗಿ, ಅಲ್ಲಿನ ರೈತರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ತಮಿಳುನಾಡಿನ ಅಧಿಕಾರಿಗಳು ಪ್ರಾಧಿಕಾರದ ಗಮನಕ್ಕೆ ತಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...