ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ಹೊಸ ಅನುಮತಿ ನೀಡಿಲ್ಲ: ಸಚಿವ ಈಶ್ವರ ಖಂಡ್ರೆ

Date:

ನಾನು ಸಚಿವನಾದ ಮೇಲೆ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ಹೊಸ ಅನುಮತಿ ನೀಡಿಲ್ಲ. ಹಲವು ವರ್ಷಗಳಿಂದ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಬಸ್ ಸಂಚಾರ ನಡೆಯುತ್ತಿದೆ. ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಇಲ್ಲ, ಹೀಗಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಗರುಡಾಕ್ಷಿ- ಆನ್‌ಲೈನ್‌ ಎಫ್ಐಆರ್ ಉದ್ಘಾಟನೆ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಬಂಡಿಪುರದಲ್ಲಿ ಈಗಾಗಲೇ ರಾತ್ರಿ 9 ರವರೆಗೆ ಸಂಚಾರಕ್ಕೆ ಅವಕಾಶವಿದೆ. ಇದರ ಜೊತೆಗೆ ಎರಡು ರಾಜ್ಯಗಳ ಎರಡು ಬಸ್ ಸಂಚಾರಕ್ಕೆ ಹಿಂದಿನಿಂದಲೂ ಅವಕಾಶವಿದೆ. ಇದಲ್ಲದೆ ಆಂಬುಲೆನ್ಸ್ ಹಾಗೂ ಆರೋಗ್ಯ ನಿಮಿತ್ತ ತುರ್ತು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ” ಎಂದರು.

“ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡಿ ಟ್ವೀಟ್ ಮಾಡಿರುವುದು ಅಕ್ಷಮ್ಯ. ಅವರ ಕಾಲದಲ್ಲೂ ರಾತ್ರಿ ಬಸ್ ಸೇವೆ ಇತ್ತು. ನನ್ನನ್ನು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ಬಿಜೆಪಿಗರು ಪ್ರಶ್ನಿಸಿದ್ದಾರೆ. ಕರ್ನಾಟಕದ ಜನತೆಯೆ ಈ ಪ್ರಶ್ನೆಗೆ ತಕ್ಕ ಉತ್ತರ ನೀಡುತ್ತಾರೆ. ಸುಳ್ಳು ಸುದ್ದಿ ಹಬ್ಬಿಸುವುದೆ ಬಿಜೆಪಿಗರ ಚಾಳಿ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವನ್ಯಜೀವಿ ಸಂರಕ್ಷಣೆಗೆ ಕಾಯಿದೆ ತಂದಿದ್ದು ಇಂದಿರಾ ಗಾಂಧಿ ಅವರು. ನಾವು ಅದನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿದ್ದೇವೆ.
ದೇವರು ಎಂದು ಪೂಜಿಸುವ ಗಣೇಶನ ಪ್ರತಿರೂಪವಾದ ಆನೆಗಳನ್ನು ಗುಂಡಿಟ್ಟು ಕೊಲ್ಲಲು ಅನುಮತಿ ಕೊಡಿ ಎಂದು ಬಿಜೆಪಿ ಶಾಸಕರು ಸದನದಲ್ಲಿ ಹೇಳುತ್ತಾರೆ. ಇವರು ಈಗ ವನ್ಯಜೀವಿ ಸಂರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಗರ ಇಂತ ಮಾತು ಭೂತದ ಬಾಯಲ್ಲಿ ಭಗವದ್ಗೀತೆಯಂತೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...