ಜನರಿಗೆ ಯಾವುದೇ ಹೊಸ ಟ್ರಾಫಿಕ್​​ ಟ್ಯಾಕ್ಸ್ ಹಾಕುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

Date:

  • ಗೊಂದಲಗಳಿಗೆ ತೆರೆ ಎಳೆದ ಡಿಸಿಎಂ ಡಿಕೆ ಶಿವಕುಮಾರ್‌
  • ‘ವಾಹನ ಸವಾರರು ಸದ್ಯ ಇರುವ ಟ್ಯಾಕ್ಸ್ ಕಟ್ಟಬೇಕು’ 

ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ ತೆರಿಗೆ ವಿಧಿಸಲಾಗುತ್ತಿದೆ ಎಂಬುದು ಸುಳ್ಳು. ಜನರಿಗೆ ಯಾವುದೇ ಹೊಸ ಟ್ರಾಫಿಕ್​​ ಟ್ಯಾಕ್ಸ್ ಹಾಕುವುದಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ವಾಹನ ಸವಾರರು ಸದ್ಯ ಇರುವ ಟ್ಯಾಕ್ಸ್ ಸರಿಯಾಗಿ ಕಟ್ಟಿದರೆ ಸಾಕು. ಈ ಬಗ್ಗೆ ಆತಂಕ ಬೇಡ” ಎಂದು ಮಾಧ್ಯಮಗಳ ವರದಿಯ ಗೊಂದಲಗಳಿಗೆ ತೆರೆ ಎಳೆದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವ ಬಗ್ಗೆ ಪ್ರತಿಕ್ರಿಯಿಸಿ, “ಹಳ್ಳಿಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಎಲ್ಲವನ್ನೂ ನೋಡಬೇಕು, ಸ್ಟ್ರೀಮ್ ಲೈನ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ವಿಚಾರವಾಗಿ ಮಾತನಾಡಿ, “ಆ ಭಾಗದ ಶಾಸಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ತನಿಖೆ ಮಾಡುವಂತೆ ಹೇಳಿದ್ದಾರೆ. ತಾವು, ಮಾಧ್ಯಮದವರು ಕೂಡ ಅವರ ಪರವಾಗಿ ಮಾತಾಡುತ್ತಿದ್ದೀರಿ, ಒಳ್ಳೆದಾಗಲಿ” ಎಂದು ಹೇಳಿದರು.

“ಕಾಂಗ್ರೆಸ್​ಗೆ ಶೇ.20 ರಷ್ಟು ಲಿಂಗಾಯತರು ಮತ ಹಾಕಿದ್ದಾರೆ. ಏಳು ಜನ ಸಚಿವರನ್ನು ಮಾಡಿದ್ದೇವೆ” ಎಂಬ ಪ್ರಕಾಶ್ ರಾಥೋಡ್ ಹೇಳಿಕೆಗೆ ಪ್ರತಿಕ್ರಿಯಿಸಿ, “ಅದು ಸೀಕ್ರೆಟ್ ಬ್ಯಾಲೆಟ್, ಯಾರು ಎಷ್ಟು ವೋಟ್ ಹಾಕಿದ್ದಾರೆ ಅನ್ನೋದು ಹೇಳಲು ಸಾಧ್ಯವಿಲ್ಲ. ರಾಜ್ಯದ ಎಲ್ಲ ಜನಾಂಗದವರು ನಮ್ಮ ಪಕ್ಷವನ್ನು ಅಧಿಕಾರ ತಂದಿದ್ದಾರೆ. ಎಲ್ಲರೂ ಸೇರಿಯೇ 136 ಸ್ಥಾನಗಳನ್ನು ನೀಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...