ಕಾಂಗ್ರೆಸ್‌ನಲ್ಲಿ ಯಾರೂ ಬಂಡಾಯ ಎದ್ದಿಲ್ಲ, 136 ಶಾಸಕರೂ ನಮ್ಮವರೇ: ಡಿಕೆ ಶಿವಕುಮಾರ್‌

Date:

  • ‘ಶಾಸಕರ ಜೊತೆ ಪ್ರವಾಸದ ಬಗ್ಗೆ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ’
  • ‘ದಿಢೀರ್ ಎಂದು ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ’

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್‌ನಲ್ಲಿ ಯಾರೂ ಬಂಡಾಯ ಎದ್ದಿಲ್ಲ. 136 ಶಾಸಕರೂ ನಮ್ಮವರೇ. ನಮ್ಮಲ್ಲಿ ಬಿರುಕಿದೆ ಎಂದು ಬಿಜೆಪಿ ನಾಯಕರು ಸುಮ್ಮನೇ ಕಥೆ ಕಟ್ಟುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಬೆಳಗಾವಿಗೆ ಆಗಮಿಸಿರುವ ಡಿಸಿಎಂ ಅನ್ನು ಸ್ವಾಗತಿಸಲು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ಬರದಿರುವ ವಿಚಾರವಾಗಿ ಬಿಜೆಪಿ ಟೀಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿ, “ದಿಢೀರ್ ಆಗಿ ಬಂದಿದ್ದೇನೆ
ನೆನ್ನೆ, ಮೊನ್ನೆ ಸತೀಶ್ ಅವರು ಮತ್ತು ನಾನು ಜೊತೆಯಲ್ಲಿಯೇ ಕುಳಿತು ಮಾತನಾಡಿದ್ದೇವೆ. ನಾನು ಬಂದಿರುವುದು ಖಾಸಗಿ ಕಾರ್ಯಕ್ರಮಕ್ಕೆ” ಎಂದು ತಿಳಿಸಿದರು.

ಪ್ರವಾಸದ ಬಗ್ಗೆ ಸತೀಶ್ ಚರ್ಚಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮಲ್ಲಿ ಯಾರ ಬಗ್ಗೆಯೂ ಮುನಿಸಿಲ್ಲ. ಎಲ್ಲ ಶಾಸಕರು ನಮ್ಮವರೇ. ಬಿಜೆಪಿಯವರಿಗೆ ಒಂದು ಸುದ್ದಿ ಬೇಕು, ಅದಕ್ಕೆ ಹೀಗೆಲ್ಲಾ ಹೇಳುತ್ತಾರೆ. ಸತೀಶ್ ಜಾರಕಿಹೊಳಿ ಅವರು ಶಾಸಕರ ಜೊತೆ ಪ್ರವಾಸ ಮಾಡುತ್ತೇನೆ ಎಂದು ಹೇಳಿದ್ದಾರೆ, ಹೌದು. ಈ ವಿಚಾರವಾಗಿ ನಾವಿಬ್ಬರೂ ಚರ್ಚಿಸಿದ್ದೇವೆ” ಎಂದು ಹೇಳಿದರು.

“ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮೊಮ್ಮಗಳ ನಾಮಕರಣ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿ ಇದ್ದಾರೆ‌. ಕೌಜಲಗಿ ಅವರಿಗೆ ಆರೋಗ್ಯ ಸರಿಯಿಲ್ಲ‌. ದಿಢೀರ್ ಎಂದು ನಿನ್ನೆ ರಾತ್ರಿ ಈ ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ. ಎಲ್ಲರಿಗೂ ಅವರದೇ ಆದ ವೈಯಕ್ತಿಕ ಕೆಲಸಗಳು ಇರುತ್ತವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎರಡು ದೇಶಗಳ ಸ್ಥಾಪನೆ- ಇಸ್ರೇಲ್ ಪ್ಯಾಲೆಸ್ತೀನಿ ಕದನಕ್ಕೆ ಕಾಯಂ ಪರಿಹಾರ

ಬೆಳಗಾವಿಯಿಂದಲೇ ಕಾಂಗ್ರೆಸ್ ಬಂಡಾಯ ಆರಂಭ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದು ಕೇಳಿದಾಗ “ಜೆ.ಎಚ್. ಪಟೇಲರ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆ ಆದಾಗ ಅವರು ಒಂದು ಭಾಷಣ ಮಾಡಿದ್ದರು. ಹೋರಿ ಮತ್ತು ನಾಯಿ ಕತೆ. ಅದನ್ನು ನೀವು ಕೇಳಿದ್ದೀರಾ? ಅದನ್ನು ಬಿಜೆಪಿಯವರಿಗೆ ಕೇಳಿಸಿಕೊಳ್ಳಲು ಹೇಳಿ” ಎಂದು ತಿರುಗೇಟು ನೀಡಿದರು.

ಸತೀಶ್ ಜಾರಕಿಹೊಳಿ ಹಾಗೂ ನಿಮ್ಮ ನಡುವೆ ಬಿರುಕು ಮೂಡಿದೆಯೇ ಎಂದು ಕೇಳಿದಾಗ, “ನಮ್ಮ ನಡುವೆ ಯಾವುದೇ ಬಿರುಕಿಲ್ಲ. ನನ್ನನ್ನು ಸ್ವಾಗತಿಸಲು ಬರಲಿಲ್ಲ, ಅದು ಇದು, ಎಂದು ನೀವೇ ಏನೇನೋ ಹೇಳುತ್ತೀರಿ?. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿ” ಎಂದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...