ಅದಿರು ಕಳ್ಳತನ: ಶಾಸಕ ಸತೀಶ್ ಸೈಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Date:

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ನ್ಯಾಯಾಲಯದ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್‌ ಹೊರಡಿಸಿದೆ.

ಸತೀಶ್‌ ಸೈಲ್‌ ಮತ್ತಿತರರ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣವನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಸತೀಶ್ ಸೈಲ್ ಪರ ಕಿರಿಯ ವಕೀಲರು, ‘ಅರ್ಜಿದಾರರ ಪರ ಹಿರಿಯ ವಕೀಲರು ಮತ್ತು ಅರ್ಜಿದಾರರು ಧಾರವಾಡಕ್ಕೆ ತೆರಳಿರುವ ಕಾರಣದಿಂದ ಗೈರಾಗಿದ್ದಾರೆ. ಆದ್ದರಿಂದ ವಿನಾಯತಿ ನೀಡಬೇಕು’ ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ನ್ಯಾಯಾಧೀಶರು, ‘ಇದು 2014ರ ಪ್ರಕರಣ. ನ್ಯಾಯಾಲಯ ಈ ಹಿಂದಿನ ಸಂದರ್ಭಗಳಲ್ಲಿ ಅರ್ಜಿದಾರರ ಗೈರು ಹಾಜರಿಗೆ ವಿನಾಯತಿ ನೀಡಿತ್ತು. ಆದಾಗ್ಯೂ, ನ್ಯಾಯಾಲಯ ಪಾಟಿ ಸವಾಲು ನಡೆಸುತ್ತಿರುವ ಈ ಸಂದರ್ಭದಲ್ಲಿ, ವಿಚಾರಣೆ ವಿಳಂಬಗೊಳಿಸಲು ವಕೀಲರು ಮುಂದೂಡಿಕೆಯ ಮನವಿ ಮಾಡಿದ್ದಾರೆ. ಬೇರೊಂದು ನ್ಯಾಯಾಲಯದಲ್ಲಿ ಕಾರ್ಯ ನಿರತವಾಗಿದ್ದೇನೆ ಎಂಬ ಕಾರಣಕ್ಕೆ ವಕೀಲರ ಹಾಜರಿಗೆ ವಿನಾಯತಿ ನಿಡಿ ವಿಚಾರಣೆಯನ್ನು ಮುಂದೂಡಲು ಆಧಾರ ಎನಿಸುವುದಿಲ್ಲ ಎಂಬ ಸ್ಥಾಪಿತ ಕಾನೂನಿನ ಅಡಿಯಲ್ಲಿ ಈ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ಆದೇಶಿಸಿದರು.

ಇದನ್ನು ಓದಿದ್ದೀರಾ? ಶಾಲೆಗಳು, ಆಸ್ಪತ್ರೆಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ: ಸುಪ್ರೀಂ ಕೋರ್ಟ್ ಸೂಚನೆ

‘ಈ ನ್ಯಾಯಾಲಯ ಹಾಲಿ ಮತ್ತು ಮಾಜಿ ಸಂಸದರು- ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರ್ದೇಶನಗಳ ಪ್ರಕಾರ ಸ್ಥಾಪಿಸಿದ ವಿಶೇಷ ನ್ಯಾಯಾಲಯವಾಗಿದೆ. ಹಾಲಿ ಪ್ರಕರಣದಲ್ಲಿ ಸಾಕ್ಷಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಎಲ್ಲ ಆರೋಪಿಗಳೂ ಹಾಜರಿರುವಾಗ ಮೊದಲ ಆರೋಪಿಯಾದ ಇವರೊಬ್ಬರ ಗೈರನ್ನು ಮನ್ನಿಸಲಾಗದು. ಹಾಗಾಗಿ, ಸತೀಶ್ ಸೈಲ್ ವಿರುದ್ಧ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಇದೇ ವೇಳೆ ಜಾರಿ ನಿರ್ದೇಶನಾಯ (ಇ.ಡಿ) ದಾಖಲಿಸಿರುವ ಮತ್ತೊಂದು ಪ್ರಕರಣದಲ್ಲಿ ವೈದ್ಯಕೀಯ ಚಿಕಿತ್ಸೆ ಆಧಾರದಡಿ ಮಧ್ಯಂತರ ಜಾಮೀನು ಪಡೆದು ಹೊರಗಿರುವ ಸತೀಶ್ ಸೈಲ್ ಅವರ ಜಾಮೀನು ಅರ್ಜಿಯನ್ನೂ (ವೈದ್ಯಕೀಯ ಕಾರಣದ ಅರ್ಜಿ) ನ್ಯಾಯಾಧೀಶರು ವಜಾಗೊಳಿಸಿ ಆದೇಶಿಸಿದರು.

ಸಾಕ್ಷಿ ವಿಚಾರಣೆಯಲ್ಲಿ 24 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...