ಕೆಆರ್‌ಎಸ್‌ನಿಂದ ಒಂದು ಹನಿ ನೀರು ಬಿಡುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

  • 2,000 ಕ್ಯೂಸೆಕ್‌ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ
  • 1,000 ಕ್ಯೂಸೆಕ್‌ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ: ಡಿಕೆಶಿ

3,000 ಸಾವಿರ ಕ್ಯೂಸೆಕ್‌ ನೀರಿನಲ್ಲಿ ಕೆಆರ್‌ಎಸ್‌ನಿಂದ ಒಂದು ಹನಿ ನೀರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “2,000 ಕ್ಯೂಸೆಕ್‌ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್‌ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ರಾಜಿಯಾಗುವುದಿಲ್ಲ. ಮಂಡ್ಯ ಭಾಗದ ರೈತರ ಹಿತ ಮುಖ್ಯ” ಎಂದರು.

ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೇಕೆದಾಟು ಯೋಜನೆ ಬೇಕು ಎಂದು ವಿರೋಧ ಪಕ್ಷದವರು ಅಧಿಕಾರಿಗಳಿಗೆ ಅರ್ಜಿ ಕೊಟ್ಟಿದ್ದಾರೆ. ಇಲ್ಲಿ ಕೊಟ್ಟರೆ ಏನು ಪ್ರಯೋಜನ, ಮಾಜಿ ಪ್ರಧಾನಿ ದೇವೆಗೌಡರು ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನೀವು ದೆಹಲಿಯಲ್ಲಿ ಹೋರಾಟ ಮಾಡಿ, ಇಲ್ಲಿ ಮಾಡಿದರೆ ಏನು ಪ್ರಯೋಜನ?” ಎಂದರು.

“ಸುಪ್ರೀಂಕೋರ್ಟ್ ಕೂಡ ಮೌಖಿಕವಾಗಿ ಮೇಕೆದಾಟು ಯೋಜನೆಗೆ ಪೂರಕವಾಗಿ ಮಾತನಾಡಿದೆ. 26 ಜನ ಸಂಸದರು ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಪರವಾಗಿ ಮಾತನಾಡಿದರು. ಅದರಂತೆ ಈಗ ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿ” ಎಂದು ಆಗ್ರಹಿಸಿದರು.

ತಮಿಳುನಾಡಿನ ಜೊತೆ ಡಿ ಕೆ ಶಿವಕುಮಾರ್ ಅವರು ಮಾತುಕತೆ ನಡೆಸುತ್ತಿಲ್ಲ ಎಂದು ಕುಮಾರಸ್ವಾಮಿ ಅವರ ಆರೋಪಕ್ಕೆ “ರಾಜ್ಯದ ಹಿತಕ್ಕೆ ಎರಡು ಪಕ್ಷಗಳು ಒಂದಾಗಿದ್ದಾರೆ. ಈಗಲೂ ರಾಜ್ಯದ ಹಿತಕ್ಕೆ ಮೇಕೆದಾಟು ವಿಚಾರವಾಗಿ ಕೇಂದ್ರದ ಮೇಲೆ ಒತ್ತಡ ತರಲಿ, ಮೂರು ವರ್ಷದಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಮುಗಿಸುತ್ತೇನೆ” ಎಂದರು.

ಕರ್ನಾಟಕ ಬಂದ್‌ ಬೇಡ

“12,500 ಕ್ಯೂಸೆಕ್‌ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು, ನಿಮ್ಮ ಹೋರಾಟದಿಂದ ಸಮಿತಿ 3,000 ಕ್ಯೂಸೆಕ್‌ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದೆ. ಮತ್ತೊಮ್ಮೆ ಹೋರಾಟ ಏತಕ್ಕೆ? ಹೋರಾಟಗಾರರ ಬಗ್ಗೆ ನಮಗೆ ತಕರಾರು ಇಲ್ಲ, ಅವರ ಜೊತೆ ನಾವಿರುತ್ತೇವೆ. ಸೆ.29 ರಂದು ಮತ್ತೊಮ್ಮೆ ಬಂದ್ ಎಂದು ಹೇಳಲಾಗುತ್ತಿದೆ. ಇದರಿಂದ ಸಾವಿರಾರು ಕೋಟಿ ವಹಿವಾಟು ಹಾಳಾಗುತ್ತದೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ. ಬಂದ್ ಬೇಡ” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...