‘ಅದು ಪ್ರೀತಿಯಲ್ಲ, ಬಲವಂತದ ಮದುವೆ’: ಕಾಂಗ್ರೆಸ್ ಮೈತ್ರಿ ಕುರಿತು ಎಚ್‌.ಡಿ ದೇವೇಗೌಡ ಉವಾಚ

Date:

2018ರ ವಿಧಾನಸಭಾ ಚುನಾವಣೆಯ ನಂತರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯನ್ನು ‘ಬಲವಂತದ ಮದುವೆ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಬಣ್ಣಿಸಿದ್ದಾರೆ. ‘ಅದು ಪ್ರೀತಿಯಲ್ಲ, ಬಲವಂತದ ಮದುವೆ. ಆದ್ದರಿಂದಲೇ, ಆ ಸಂಬಂಧಕ್ಕೆ ವಿಚ್ಛೇದನ ನೀಡಬೇಕಾಯಿತು. ಅದಕ್ಕೆ ಸಾಕಷ್ಟು ಕಾರಣಗಳಿವೆʼ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ನಡೆದ ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, “ಗೌಡರು ಪ್ರೀತಿ ಮಾಡಿದ್ದು ನಮ್ಮನ್ನು (ಕಾಂಗ್ರೆಸ್). ಆದರೆ ಮದುವೆಯಾಗಿದ್ದು ಮಾತ್ರ ಮೋದಿಯವರನ್ನು (ಬಿಜೆಪಿ)” ಎಂದು ಕಿಚಾಯಿಸಿದ್ದರು.

ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೇವೇಗೌಡ, “ನನ್ನ ಆತ್ಮೀಯ ಸ್ನೇಹಿತ ಖರ್ಗೆಯವರಿಗೆ ನಾನು ಮದುವೆಯ ಭಾಷೆಯಲ್ಲೇ ಉತ್ತರಿಸುತ್ತೇನೆ. ಕಾಂಗ್ರೆಸ್ ಜೊತೆಗಿನದ್ದು ಪ್ರೀತಿಯಲ್ಲ, ಅದೊಂದು ಬಲವಂತದ ಮದುವೆಯಾಗಿತ್ತು. ಆ ಸಂಬಂಧದಲ್ಲಿ ಕೇವಲ ಕಿರುಕುಳ ಮತ್ತು ಹಿಂಸೆ ಇದ್ದ ಕಾರಣ ನಾನು ವಿಚ್ಛೇದನ ನೀಡಬೇಕಾಯಿತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: LPG ಹೊತ್ತು ಭಾರತಕ್ಕೆ ಬಂದ ‘ಶಿವಾಲಿಕ್’ ಹಡಗು; ತಣಿಯುವುದೇ ಕೊರತೆ-ಆತಂಕ?

“2018ರ ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಗುಲಾಂ ನಬಿ ಆಜಾದ್ ಅವರು ಕುಮಾರಸ್ವಾಮಿ ಅವರನ್ನೇ ಮುಖ್ಯಮಂತ್ರಿ ಮಾಡಲು ಒತ್ತಾಯಿಸಿದ್ದರು. ಆದರೆ, ನಾನು ಖರ್ಗೆ ಅವರನ್ನೇ ಮುಖ್ಯಮಂತ್ರಿ ಮಾಡೋಣವೆಂದು ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಹೇಳಿದ್ದೆ. ಆದರೂ ಕಾಂಗ್ರೆಸ್ ಅದಕ್ಕೆ ಒಪ್ಪಲಿಲ್ಲ” ಎಂದು ಆರೋಪಿಸಿದ್ದಾರೆ.

“ಇಷ್ಟೆಲ್ಲಾ ಸಡಗರದ ಮದುವೆಯ ನಂತರ ಕಾಂಗ್ರೆಸ್ ನಮ್ಮನ್ನು ಕೈಬಿಟ್ಟಿತು. 2019ರಲ್ಲಿ ಮೈತ್ರಿ ಸರ್ಕಾರ ಪತನಗೊಳ್ಳಲು ಕಾಂಗ್ರೆಸ್ ನಾಯಕರೇ ಕಾರಣ. ಎಷ್ಟು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋದರು ಮತ್ತು ಅವರನ್ನು ಕಳುಹಿಸಿದವರು ಯಾರು ಎಂಬುದು ಜಗತ್ತಿಗೇ ಗೊತ್ತಿದೆ. ಅಂದು ಪಕ್ಷಾಂತರಕ್ಕೆ ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ಕೈಗೊಂಡಿದ್ದರೆ, ಇಂದು ಖರ್ಗೆಯವರು ಇನ್ನೂ ಉತ್ತಮ ಸ್ಥಾನದಲ್ಲಿರುತ್ತಿದ್ದರು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...