ಕುದುರೆಮುಖ ಕಬ್ಬಿಣ ಅದಿರು ಕಂಪನಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಅಡ್ಡಿ: ಎಚ್‌ ಡಿ ಕುಮಾರಸ್ವಾಮಿ ಆರೋಪ

Date:

ಕುದುರೆಮುಖ ಕಬ್ಬಿಣ ಅದಿರು ಕಂಪೆನಿ (ಕೆಐಒಸಿಎಲ್) ನಿತ್ಯ ₹27 ಕೋಟಿ ನಷ್ಟ ಅನುಭವಿಸುತ್ತಿದೆ. ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕೆ ಕೆಐಒಸಿಎಲ್ ಕಾರ್ಯಾಚರಣೆಗೆ ಸಣ್ಣ ಸಣ್ಣ ವಿಚಾರ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಅಡ್ಡಿಪಡಿಸುತ್ತಿರುವುದೇ ಈ ನಷ್ಟಕ್ಕೆ ಕಾರಣ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದರು.

ಶಿವಮೊಗ್ಗದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕೆಐಒಸಿಎಲ್‌ಗೆ ಸಂಡೂರಿನಲ್ಲಿ ಗಣಿ ಮಂಜೂರು ಮಾಡಿ ಅದನ್ನು ನೋಂದಣಿ ಮಾಡಿಕೊಟ್ಟದ್ದು 2016ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ. ಗಣಿಗಾರಿಕೆ ಸ್ಥಳದಲ್ಲಿ ಗಿಡ ಬೆಳೆಸಲು ಅರಣ್ಯ ಇಲಾಖೆಗೆ ₹190 ಕೋಟಿ ಹಣ ಕೆಐಒಸಿಎಲ್ ಪಾವತಿಸಿದೆ. ಆದರೆ ರಾಜ್ಯದ ಅರಣ್ಯ ಸಚಿವರಿಗೆ ಅದರ ತಲೆಬುಡ ಗೊತ್ತಿಲ್ಲ. ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಕೇಂದ್ರ ಸಚಿವನಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲು ನಾನು ಕೆಐಒಸಿಎಲ್‌ನ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಡತಕ್ಕೆ ಸಹಿ ಹಾಕಿದೆ. ಇದನ್ನು ರಾಜ್ಯ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗಲಿಲ್ಲ. ಹಾಗಾಗಿ ನನ್ನ ವಿರುದ್ಧ ಅಪಪ್ರಚಾರ ಆರಂಭಿಸಿದ್ದಾರೆ. ಕೆಐಒಸಿಎಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ ಕಾರ್ಮಿಕರನ್ನು ಏಕೆ ಬೀದಿಗೆ ತರುತ್ತೀರಿ? ನನ್ನ ಮೇಲೆ ದ್ವೇಷ ಇದ್ದರೆ ಅದನ್ನು ರಾಜಕೀಯವಾಗಿ ಬೇರೆ ಕಡೆ ತೀರಿಸಿಕೊಳ್ಳಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರ ಜೊತೆ ಸಂಘರ್ಷ ಬೇಡ

ಚುನಾವಣೆ ಸಂದರ್ಭದಲ್ಲಿ ಆರೋಪ-ಪ್ರತ್ಯಾರೋಪ, ಸಂಘರ್ಷ ಮಾಡೋಣ. ಆದರೆ ಹೀಗೆ ಪ್ರತೀ ದಿನ ರಾಜಕೀಯಕ್ಕಾಗಿ ಸಂಘರ್ಷ ಮಾಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿ ಕುಂಠಿತ ಆಗಲಿದೆ. ಮಾಜಿ ಸಿಎಂ ಆಗಿ ನನ್ನ ಅನುಭವದಿಂದ ಹೇಳುತ್ತಿದ್ದೇನೆ; ಕೇಂದ್ರದೊಂದಿಗೆ ನಿತ್ಯ ಸಂಘರ್ಷ ಬೇಡ” ಎಂದು ಸಲಹೆ ನೀಡಿದರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಕೂ ಮೈತ್ರಿ

“ಬಿಜೆಪಿಯೊಂದಿಗೆ ಮೈತ್ರಿ ಸುದೀರ್ಘ ಅವಧಿಗೆ ಮುಂದುವರೆಯಬೇಕು ಎಂಬುದು ಜೆಡಿಎಸ್ ಆಶಯ. ಹೀಗಾಗಿ ಮಹಾನಗರ ಪಾಲಿಕೆ ಸೇರಿದಂತೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯನ್ನು ಮುಂದುವರಿಸಲಿದ್ದೇವೆ” ಎಂದು ಇದೇ ವೇಳೆ ತಿಳಿಸಿದರು.

ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಖಾಸಗಿಯವರಿಗೆ ಮಾರಾಟ ಮಾಡಲು 2016ರಲ್ಲಿ ತೀರ್ಮಾನ ಮಾಡಲಾಗಿದೆ. ಪ್ರಧಾನಿ ಮೋದಿ ಹಾಗೂ ಕೇಂದ್ರದ ಹಣಕಾಸು ಇಲಾಖೆಗೆ ಮನವರಿಕೆ ಮಾಡಿ ಅದನ್ನು ತಡೆ ಹಿಡಿಯಬೇಕಿದೆ. ವಿಐಎಸ್‌ಎಲ್ ಕಾರ್ಖಾನೆಗೆ ಈಗ ಸಂಪೂರ್ಣ ಹೊಸ ತಾಂತ್ರಿಕತೆಯ ಯಂತ್ರಗಳ ಅಳವಡಿಸಬೇಕಿದೆ. ಅದಕ್ಕೆ ಅಗತ್ಯವಿರುವ ₹15 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿಸಲು ಪ್ರಯತ್ನ ನಡೆಸಿದ್ದೇನೆ. ವಿಶ್ವೇಶ್ವರಯ್ಯ ಅವರ ಹೆಸರು ಉಳಿಸುವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...