ದೀಪಾವಳಿ ಬಳಿಕ ಅಧಿಕೃತ ಆದೇಶ; ಚನ್ನರಾಯಪಟ್ಟಣ ರೈತರಿಗೆ ಎಂಬಿಪಾ ಭರವಸೆ

Date:

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ 1777 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನದಿಂದ ಕೈಬಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿ, ಮೂರು ತಿಂಗಳಾದರೂ ಅಧಿಕೃತ ಆದೇಶ ಹೊರಬಿದ್ದಿಲ್ಲ. ಈ ಸಂಬಂಧ ಇಲ್ಲಿನ ರೈತರಲ್ಲಿ ಆತಂಕ ಮನೆಮಾಡಿದ್ದು, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲರನ್ನು ಭೇಟಿಯಾಗಿ ತಮ್ಮ ಆಗ್ರಹವನ್ನು ಸಲ್ಲಿಸಿದ್ದಾರೆ. ರೈತರ ನಿಯೋಗಕ್ಕೆ ಸಚಿವರು ಮತ್ತೆ ಭರವಸೆ ನೀಡಿದ್ದು, ದೀಪಾವಳಿ ಬಳಿಕ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಸರ್ಕಾರದ ವಿಳಂಬ ನೀತಿಯಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದು, ಇದರ ಭಾಗವಾಗಿ ಇಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರನ್ನು ಭೇಟಿ ಮಾಡಿದ್ದರು ಮತ್ತು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಇದನ್ನೂ ಓದಿರಿ: ಚನ್ನರಾಯಪಟ್ಟಣ ರೈತರ ಮೇಲೆ ಮತ್ತೆ ಕೆಐಎಡಿಬಿ ಸವಾರಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜುಲೈ 15ರಂದು ಮುಖ್ಯಮಂತ್ರಿಯವರು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಮೌಖಿಕವಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಆದರೆ ಈವರೆಗೂ ಮುಖ್ಯಮಂತ್ರಿಯವರ ಮಾತಿಗೆ ಅಧಿಕೃತ ಮುದ್ರೆ ದೊರೆತಿಲ್ಲ. ಈ ನಡುವೆ, ಸರ್ಕಾರದ ಘೋಷಣೆಗೆ ವಿರುದ್ಧವಾಗಿ ಎರಡು ಹಳ್ಳಿಗಳ ಜಮೀನುಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದು, ರೈತರ ಆತಂಕವನ್ನು ಇನ್ನಷ್ಟು ಹೆಚ್ಚಿಸಿವೆ.

mbpa 2

ಇಂದು ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರನ್ನು ರೈತರ ನಿಯೋಗ ಭೇಟಿ ಮಾಡಿತು. ಇದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರೊಂದಿಗೂ ಮಾತನಾಡಿತು. ಮುಖ್ಯಮಂತ್ರಿಯವರ ಹೇಳಿಕೆ ಸಂದರ್ಭದಲ್ಲಿ ಹಾಜರಿದ್ದ ಮುನಿಯಪ್ಪನವರೂ ಕ್ರಮವಹಿಸಬೇಕು ಎಂದು ನಿಯೋಗ ಆಗ್ರಹಿಸಿದೆ.

ದೀಪಾವಳಿ ನಂತರ ಆದೇಶ: ಸಚಿವ ಎಂ.ಬಿ.ಪಾಟೀಲ್ ಭರವಸೆ

ರೈತರ ನಿಯೋಗದೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲರು, “ಈ ಕುರಿತು ಈಗಾಗಲೇ ಸರ್ಕಾರದಲ್ಲಿ ಚರ್ಚೆಯಾಗಿದೆ. ದೀಪಾವಳಿ ಹಬ್ಬ ಮುಗಿದ ನಂತರ ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಆದೇಶ ಹೊರಡಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ. ಆದರೆ, ಅಧಿಕೃತ ಆದೇಶ ಹೊರಬೀಳುವವರೆಗೆ ತಮ್ಮ ಆತಂಕ ನಿವಾರಣೆಯಾಗುವುದು ಕಷ್ಟ ಎಂದು ಸಚಿವರಿಗೆ ತಿಳಿಸಿರುವ ರೈತರು, ಸಮಿತಿಯಲ್ಲಿ ಚರ್ಚಿಸಿ ತಮ್ಮ ಮುಂದಿನ ಹೋರಾಟದ ನಿರ್ಧಾರಕ್ಕೆ ಬರುವುದಾಗಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...