ಮತ್ತೆ ಏರಿದ ಈರುಳ್ಳಿ ಬೆಲೆ; 100ರ ಗಡಿ ದಾಟುವ ಸಾಧ್ಯತೆ

Date:

ಇತ್ತೀಚಿನ ದಿನಗಳಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಎಲ್ಲ ರೀತಿಯ ತರಕಾರಿ ಬೆಲೆಯೂ ಗಗನಕ್ಕೇರಿದೆ. ಪೌಷ್ಟಿಕ ಆಹಾರ ಕೊಳ್ಳಲು ಬಡವರು ಮಾತ್ರವಲ್ಲ, ಸಾಮಾನ್ಯರೂ ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ಈ ಹಿಂದೆ 100 ರೂ. ದಾಟಿದ್ದ ಈರುಳ್ಳಿ ದರ, ಕೆಲ ದಿನಗಳಿಂದ 50 ರೂ.ಗಳ ಆಸುಪಾಸಿನಲ್ಲಿತ್ತು. ಇದೀಗ, ಮತ್ತೆ ಏರಿಕೆ ಕಂಡಿದೆ.

ಪ್ರಸ್ತುತ, ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ 80 ರೂ.ಗೆ ಏರಿಕೆಯಾಗಿದೆ. ಹೀಗೆಯೇ ಮುಂದುವರೆದರೆ ಮತ್ತೆ 100 ರೂ. ದಾಟುವ ಸಾಧ್ಯತೆಗಳಿವೆ ಎಂದು ವರ್ತಕರು ಹೇಳುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈರುಳ್ಳಿಯ ಗುಣಮಟ್ಟ ಕುಸಿದ್ದು, ಇಳುವರಿಯೂ ಕಡಿಮೆಯಾಗಿದೆ. ನೆರೆಯ ರಾಜ್ಯಗಳಿಂದ ಈರುಳ್ಳಿಯನ್ನು ಆಮದು ಮಾಡಿಕೊಳ್ಳಬೇಕಾಗಿದೆ. ಹೀಗಾಗಿ, ಬೆಲೆ ಏರಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಎಪಿಎಂಸಿಯಲ್ಲಿ ಕಳೆದ ವಾರ ಕ್ವಿಂಟಾಲ್‌ ಈರುಳ್ಳಿಗೆ 2,500ದಿಂದ 4,000 ರೂ. ಇತ್ತು. ಇದೀಗ, 7,500 ರೂ.ಗೆ ಏರಿಕೆಯಾಗಿದೆ. ಪರಿಣಾಮ, ಚಿಲ್ಲರೆ ಅಂಗಡಿಗಳಲ್ಲಿಯೂ ಬೆಲೆ ಏರುತ್ತಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...