ಕಾವೇರಿ | ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ಧಿ ಬಂದಿದೆ: ಬೊಮ್ಮಾಯಿ ಟೀಕೆ

Date:

  • ಕಾವೇರಿ ಹೋರಾಟಕ್ಕೆ ಬಿಜೆಪಿ ನಿರಂತರ ಬೆಂಬಲ
  • ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ‌ ಬಂದಿದೆ

ಕಾವೇರಿ ನದಿ ನೀರಿಗಾಗಿ ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಮ್ಮ ಬಿಜೆಪಿ ಬೆಂಬಲ ಇರುತ್ತದೆ. ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ಧಿ ಬಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ತಮಿಳುನಾಡಿಗೆ ಈಗ 3 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್‌ ಆದೇಶ ಬಂದಾಗ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ಧಿ ಬಂದಿದೆ” ಎಂದರು.

“ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು‌ ಟ್ರಿಬ್ಯುನಲ್ ಆದೇಶವನ್ನ ಉಲ್ಲಂಘನೆ ಮಾಡಿದೆ. ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾವೇರಿಗಾಗಿ ಬಂದ್‌ ಮಾಡುವ ಅಗತ್ಯವಿಲ್ಲ, ಅಹಿತಕರ ಘಟನೆಗಳಾದರೆ ಕ್ರಮ: ಗೃಹಸಚಿವ ಪರಮೇಶ್ವರ್

ಬರ ಪರಿಹಾರ ನೀಡಬೇಕು

“ಉತ್ತರ ಕರ್ನಾಟಕ ಬಾಗದಲ್ಲಿ ಸಾಕಷ್ಟು ಬರಗಾಲ ಇದೆ. ಮಳೆಯಿಲ್ಲದೆ ಮುಂಗಾರು ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಆದರೆ ಈವರೆಗೂ ಬೆಳೆ ಪರಿಹಾರಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ. ಹಿಂದೆ ಪ್ರವಾಹ ಬಂದಾಗ ನಾವು 2 ಪಟ್ಟು ಪರಿಹಾರ ನೀಡಿದ್ದೆವು. ರಾಜ್ಯ ಸರ್ಕಾರ ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಕಾವೇರಿ ಅಷ್ಟೇ ಅಲ್ಲ ಕೃಷ್ಣೆಯ ಹಿತರಕ್ಷಣೆಗೂ ಮುಂದಾಗಬೇಕು. ಈ‌ ವಿಚಾರದಲ್ಲಿ‌ ನಾವೆಲ್ಲ ಒಂದಾಗಿದ್ದೇವೆ” ಎಂದರು‌.

ಆಪರೇಷನ್‌ನಿಂದ ಕಾಂಗ್ರೆಸ್‌ಗೆ ಲಾಭವಿಲ್ಲ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್ ಗೆ ಮುಂದಾಗಿದೆ ಇದು ಕಾಂಗ್ರೆಸ್‌ನ ವೀಕ್ನೆಸ್. ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್‌ಗೆ ಹೋಗುತ್ತಾರೆ. ಅದರಿಂದ ಕಾಂಗ್ರೆಸ್‌ಗೆ ಯಾವುದೇ ಲಾಭವಿಲ್ಲ. ಟಿಕೆಟ್ ಸಿಗದೇ ಇದ್ದವರು ಹೋಗುವುದು ಸಹಜ ಅದರ ಬಗ್ಗೆ ನಾವೇನು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ನ ಈ‌ ಆಪರೇಶನ್ ನಿಂದ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...