ಸರ್ಕಾರಿ ಕಚೇರಿ & ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‌ ಬಳಕೆ ನಿಷೇಧಿಸಿ ಆದೇಶ

Date:

ಸರ್ಕಾರಿ ಕಚೇರಿ ಮತ್ತು ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. 2024 ನವೆಂಬರ್‌ನಲ್ಲೇ ಈ ನಿಯಮ ಜಾರಿಗೆ ತಂದಿದ್ದರೂ ಆದೇಶ ಪಾಲನೆ ಆಗದಿರುವ ಹಿನ್ನಲೆಯಲ್ಲಿ ಮತ್ತೆ ಜಾರಿಗೆ ತರಲಾಗಿದೆ.

ಪ್ಲಾಸ್ಟಿಕ್‌ನಿಂದ ಪರಿಸರ ಹಾಗೂ ಮನಷ್ಯನ ಆರೋಗ್ಯ ಮೇಲೆ ಬೀಳುವ ದುಷ್ಪರಿಣಾಮ ತಡೆಯಲು ಸರ್ಕಾರ ಈ ನಿಯಮ ಜಾರಿಗೆ ಜನವರಿ 31 ರಂದು ಸುತ್ತೋಲೆ ಹೊರಡಿಸಿದೆ.

ಹಲವಾರು ವೇದಿಕೆ ಕಾರ್ಯಕ್ರಮಗಳಲ್ಲಿ ಅತಿಥಿಗಳಿ ಅರ್ಧ ಲೀಟರ್ ನೀರಿನ ಬಾಟಲ್‌ಗಳನ್ನು ಮುಂದಿಡುವುದು ರೂಢಿಯಾಗಿತ್ತು. ಹಲವೆಡೆ ಸಾರ್ವಜನಿಕರಿಗೂ ವಿತರಿಸಲಾಗುತ್ತದೆ. ನೂರಾರು, ಸಾವಿರಾರು ಸಂಖ್ಯೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಸರ್ಕಾರವೇ ಪ್ರೋತ್ಸಾಹಿಸಿದಂತಾಗುತ್ತದೆ ಎಂಬ ಕಾರಣಕ್ಕೆ ಏಕ ಬಳಕೆಯ ಪ್ಲಾಸ್ಟಿಕ್ ಬಾಟ‌ಲ್‌ಗಳನ್ನು ಕೊಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರವನ್ನು ಸರ್ಕಾರ ಕೈಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆಯೂ ಈ ಆದೇಶ ಜಾರಿಗೆ ಬರಲಿದೆ. ರಾಜ್ಯದ ಸರ್ಕಾರಿ ಕಚೇರಿ, ನಿಗಮ, ಮಂಡಳಿ, ವಿಶ್ವವಿದ್ಯಾನಿಲಯಗಳು, ಹಾಗೂ ಸರ್ಕಾರದ ಅನುದಾನದಿಂದ ಮಾಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ ನೀರಿನ ಬಳಕೆ, ಸರಬರಾಜು ನಿಷೇಧಿಸಲಾಗಿದೆ.

ಸರ್ಕಾರದ ಸಭೆ ಸಮಾರಂಭಗಳಲ್ಲಿ ಕಯಡಿಯುವ ನೀರು ಒದಗಿಸಲು ಶುಚಿತ್ವ ಉಳ್ಳ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತ್ತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...