ಪಠ್ಯದಲ್ಲಿ ದ್ವಿಭಾಷಾ ನೀತಿ ಜಾರಿ ಹೋರಾಟಕ್ಕೆ ನಮ್ಮ ನಾಡು ನಮ್ಮ ಆಳ್ವಿಕೆ ತಂಡದಿಂದ ಅಭಿಯಾನ

Date:

ಕಳೆದ ಏಳು ತಿಂಗಳುಗಳಿಂದ ರಾಜ್ಯ ಪಠ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಹೋರಾಟ ಮಾಡುತ್ತಿರುವ ನಮ್ಮ ನಾಡು ನಮ್ಮಆಳ್ವಿಕೆ ತಂಡವು ಮುಂದಿನ ಆನ್‌ಲೈನ್‌ ಸಹಿ ಅಭಿಯಾನಕ್ಕೆ ಬೆನ್ನಿಗೆ ನಿಲ್ಲುವಂತೆ ಕೋರಿಕೊಂಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ನಮ್ಮ ನಾಡು ನಮ್ಮಆಳ್ವಿಕೆ ತಂಡ, ಚಿತ್ರಸಾಹಿತಿ ಮತ್ತು ಚಲನಚಿತ್ರ ನಿರ್ದೇಶಕ ಹಾಗೂ ನಮ್ಮ ನಾಡು ನಮ್ಮ ಆಳ್ವಿಕೆಯ ಸದಸ್ಯರಾದ ಕವಿರಾಜ್ ಅವರು ಅಭಿಯಾನಕ್ಕೆ 2024ರಲ್ಲಿ ಚಾಲನೆ ಕೊಟ್ಟಿದ್ದರು ಎಂದು ಹೇಳಿದೆ.

ಚಿತ್ರ ನಿರ್ದೇಶಕರಾದ ಬಿ ಎಮ್ ಗಿರಿರಾಜ್, ನವೆಂಬರ್ 1ರಂದು ಬೆಂಗಳೂರಿನಲ್ಲಿ ಬೈಕ್ ರ್‍ಯಾಲಿಯನ್ನು, ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಸುಮಾರು 1 ಲಕ್ಷ ಕರಪತ್ರ ಹಂಚುವುದರ ಮೂಲಕ ಜಾಗೃತಿ ಅಭಿಯಾನ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಸಿದ ಎರಡು ನುಡಿ-ಜಾಗೃತಿಯ ಕಿಡಿ ಸಭೆಯ ಬಗ್ಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಣ ಸಚಿವರಾದ ಮಾನ್ಯ ಮಧು ಬಂಗಾರಪ್ಪರವರನ್ನು ತಂಡವು ಭೇಟಿ ಮಾಡಿ ಸರಕಾರಕ್ಕೆ ಮನವಿ ಸಲ್ಲಿಸಿ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಿಗೂ ನಮ್ಮ ಮನವಿ ಸಲ್ಲಿಸಿ, ಅವರು ತಮ್ಮ ಟಿಪ್ಪಣಿಯೊಂದಿಗೆ ಮುಖ್ಯಮಂತ್ರಿಗಳ ಕಚೇರಿಗೆ ತಲುಪಿಸಿದೆ” ಎಂದು ಹೇಳಿದರು.

“ಜೊತೆಗೆ 2023-24 ರ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯಲ್ಲಿ ಹಿಂದಿ ಒಂದರಲ್ಲೇ 90,000ಕ್ಕೂ ಹೆಚ್ಚು ಮಕ್ಕಳು ಮೂರನೇ ಬಾಷೆ ಹಿಂದಿ ಒಂದರಲ್ಲೇ ಅನುತ್ತೀರ್ಣರಾಗಿದ್ದು, ಇದು ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ” ಎಂದು ತಿಳಿಸಿದರು.

“ಹಿಂದಿಯನ್ನು ಯಾರೂ ದ್ವೇಷಿಸುತ್ತಿಲ್ಲ. ನಮಗೆ ಹಿಂದಿ ಸಿನಿಮಾ, ಹಾಡುಗಳು ವಯಕ್ತಿಕವಾಗಿ ಇಷ್ಟವಿದ್ದರೂ ಕಲಿಕೆಯಲ್ಲಿ ಕರ್ನಾಟಕದ ಮಕ್ಕಳಿಗೆ ಮೂರನೇ ಭಾಷೆಯು ಹೊರೆಯಾಗಿದೆ. ಇದು ಹಿಂದಿ ಸಾಮ್ರಾಜ್ಯಶಾಹಿಯ ಹಿಂದಿ ಹೇರಿಕೆಯ ಕುತಂತ್ರ” ಎಂದು ಆರೋಪಿಸಿದರು.

ಸಜಿತ್ ಗೌಡ ಮಾತನಾಡಿ, “ಕನ್ನಡ ನೆಲದಲ್ಲಿ ಹಿಂದಿ ಕಡ್ಡಾಯ ಕಲಿಕೆಯು ಸಾಂಸ್ಕೃತಿಕ ದಾಳಿ” ಎಂದು ಹೇಳಿದರು.

ಕನ್ನಡ ಹೋರಾಟಗಾರ ಅರುಣ್ ಜಾವಗಲ್ ಮಾತನಾಡಿ, “ಮೂರನೆಯ ಭಾಷೆಯಾಗಿ ಹಿಂದಿ ಕಲಿಸುವುದು ಹಿಂದಿ ಹೇರಿಕೆಯ ಒಂದು ಭಾಗವಾಗಿದ್ದು ನಾವು ಅದನ್ನು ಹಿಮ್ಮೆಟ್ಟಬೇಕು” ಎಂದು ಹೇಳಿದರು

ಶೃತಿ ಮರುಳಪ್ಪ ಮಾತನಾಡಿ, “ತ್ರಿಭಾಷಾ ಸೂತ್ರವನ್ನು ಉತ್ತರ ಭಾರತದ ರಾಜ್ಯಗಳು ಅಳವಡಿಸಿಕೊಂಡಿಲ್ಲ, ತಮಿಳು ನಾಡು ಹಿಂದಿಯನ್ನು ಒಪ್ಪದೆಯೇ ಉತ್ತಮ ಸಾಮಾಜಿಕ-ಆರ್ಥಿಕ ಏಳಿಗೆ ಸಾಧಿಸಿದೆ, ಮಹಾರಾಷ್ಟ್ರದಲ್ಲಿಯೂ ಅಲ್ಲಿನ ಮುಖ್ಯಮಂತ್ರಿಗಳು ಇಂಗ್ಲಿಶ್ ಮತ್ತು ಮರಾಠಿ ಕಲಿಕೆಯನ್ನು ಪ್ರತಿಪಾಸಿದ್ದಾರೆ. ಕರ್ನಾಟಕದ ಮಕ್ಕಳಿಗೆ ಮಾತ್ರ ಮೂರನೆಯ ಭಾಷೆ ಹೊರೆಯಾಗಿದೆ, ಇದು ಕೊನೆಯಾಗಬೇಕು” ಎಂದು ಹೇಳಿದರು.

ರಮೇಶ್ ಬೆಲ್ಲಂಕೊಂಡ ಮಾತನಾಡಿ, “ಅಭಿಯಾನ ಕರ್ನಾಟಕ ರಾಜ್ಯ ಪಠ್ಯಕ್ರಮದಲ್ಲಿ ದ್ವಿಭಾಷಾ ನೀತಿಯನ್ನು ಆಗ್ರಹಿಸಿ ಶುರುವಾದ ಆನ್ಲೈನ್ ಪಿಟಿಶನ್ನಿಗೆ 25,000ಕ್ಕೂ ಹೆಚ್ಚು ಸಹಿ ಬಂದಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...