ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ ಸಿದ್ದರಾಮಯ್ಯ

Date:

“ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ.
ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು.

ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 14,58000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ ಎಂದರು.

ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು. ಹಾಕಿದ್ರಾ ?
ಮಹದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಎಲ್ಲದರಲ್ಲೂ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಾತು ತಪ್ಪಿದೆ. ರಾಜ್ಯದ ಜನತೆಗೆ ವಂಚಿಸಿದೆ ಎಂದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಇದಕ್ಕೆಲ್ಲಾ ಉತ್ತರಿಸಬೇಕು ಎಂದರು.

ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು ಎಂದು ಟೀಕಿಸಿದರು.

ನಮ್ಮ ಸರ್ಕಾರ ಬಂದ ಬಳಿಕ 5500 ಕೋಟಿ ರೂಪಾಯಿ ಹಣವನ್ನು ಎರಡು ವರ್ಷದಲ್ಲಿ ನಾವು, ನಮ್ಮ ಕಾಂಗ್ರೆಸ್ ಸರ್ಕಾರ ಮನೆಗಳಿಗಾಗಿ ಖರ್ಚು ಮಾಡಿದ್ದೇವೆ.

ಇಷ್ಟೆಲ್ಲಾ ಆದರೂ ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಹಂಚುತ್ತಾ ತಿರುಗುತ್ತಿದೆ. ರೈತರ ಪಂಪ್ ಸೆಟ್ ಗಳಿಗೆ 2500 ಕೋಟಿ ಸಬ್ಸಿಡಿ ಪ್ರತಿ ವರ್ಷ ಕೊಡುತ್ತಿದ್ದೇವೆ. ಇದರ ಜೊತೆಗೆ ವಿಧವಾ ವೇತನ, ವೃದ್ದಾಪ್ಯ ವೇತನ ಸೇರಿ ಪ್ರತಿಯೊಂದಕ್ಕೂ ಹೇರಳವಾಗಿ ಹಣ ಬಿಡುಗಡೆ ಮಾಡುತ್ತಲೇ ಇದ್ದೇವೆ ಎಂದರು.

ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ‌ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...