ಪ್ರತಿ ಗ್ರಾಮ ಪಂಚಾಯಿತಿ ಕಚೇರಿಗೆ ಸ್ವಂತ ಕಟ್ಟಡ: ಪ್ರಿಯಾಂಕ್‌ ಖರ್ಗೆ

Date:

  • ಪ್ರಿಯಾಂಕ್‌ ಖರ್ಗೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ
  • ಗೋಮಾಳ ಭೂಮಿಯಲ್ಲಿ ಗಿಡ-ಮರ ಬೆಳೆಸಲು ಸಚಿವರ ಸೂಚನೆ

ರಾಜ್ಯದಲ್ಲಿ ಸ್ವಂತ ಕಟ್ಟಡಗಳ ಸೌಲಭ್ಯವಿಲ್ಲದ ಗ್ರಾಮ ಪಂಚಾಯಿತಿ ಕಚೇರಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಇಂತಹ ಸ್ಥಳಗಳಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡುವ ಸಲುವಾಗಿ ನರೇಗಾ ಯೋಜನೆಯಡಿ 20 ಲಕ್ಷ ರೂ.ಗಳ ಜೊತೆಗೆ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಸಚಿವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ಭವಿಷ್ಯದ ದೃಷ್ಟಿಯನ್ನಿರಿಸಿಕೊಂಡು ಗ್ರಾಮ ಪಂಚಾಯಿತಿಗಳ ಸದಸ್ಯರ ಸಂಖ್ಯೆಗೆ ಅನುಗುಣವಾಗುವಂತೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಕ್ರಮ  ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರದ ಗೋಮಾಳ ಭೂಮಿಯನ್ನು ಸಂರಕ್ಷಿಸುವ ಸಲುವಾಗಿ ಅಂತಹ ಸ್ಥಳಗಳಲ್ಲಿ ನರೇಗಾ ಕಾರ್ಯಕ್ರಮದಡಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ಮಹಿಳಾ ಪ್ರತಿನಿಧಿಗಳ ಸಬಲೀಕರಣಕಾಗಿ ಪುನಶ್ಚೇತನ, ನಾಯಕತ್ವ ಕುರಿತಂತೆ ತರಬೇತಿ ನೀಡುವುದರೊಂದಿಗೆ ಲೆಕ್ಕ ನಿರ್ವಹಣೆ ಸೇರಿದಂತೆ ಹಣಕಾಸು ವ್ಯವಸ್ಥೆಯ ಬಗ್ಗೆ ಅರಿವು ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಚಿವರು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಲಂಚ ಭಾಗ್ಯ’ ಯೋಜನೆ ನಿಮ್ಮ ಮುಂದಿನ ಹೆಜ್ಜೆ; ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು

ರಾಜ್ಯದ ಬಹುಪಾಲು ಗ್ರಾಮಗಳಲ್ಲಿ ಅಳವಡಿಸಲಾಗಿರುವ ಶುದ್ಧ ನೀರಿನ ಘಟಕಗಳ ನಿರ್ವಹಣೆಗಾಗಿ ಪ್ರತಿಷ್ಠಿತ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿ ವಾರ್ಷಿಕ ನಿರ್ವಹಣೆ ನೀಡಲು ಕ್ರಮ ಆಗಬೇಕು. ಪ್ರತಿ ಗ್ರಾಮದಲ್ಲಿಯೂ ಲಭ್ಯವಿರುವ ನೀರಿನ ಮೂಲವನ್ನು ಸಂಗ್ರಹಿಸಲು ನಡೆಸಲಾಗುತ್ತಿರುವ ನೀರಿನ ಆಡಿಟ್‌ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲದ ಮಟ್ಟ ಪರಿಶೀಲನೆಗೆ ತಜ್ಞರ ಸಮಿತಿ ರಚಿಸಲು ಹೇಳಿದ ಪ್ರಿಯಾಂಕ್‌ ಖರ್ಗೆ ಅವರು ಸಮಿತಿಯಲ್ಲಿ ವಿವಿಧ ಕ್ಷೇತ್ರಗಳ ಮತ್ತಷ್ಟು ತಜ್ಞರನ್ನು ಸೇರಿಸಿಕೊಳ್ಳಬೇಕು. ರಾಜ್ಯದಲ್ಲಿ 7,100 ಕಿ ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಮಾಡಲು ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಕಳಪೆ ಕಾಮಗಾರಿ ಮಾಡಿದ ಆರು ಮಂದಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲೂ ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...