ಮುಸ್ಲಿಮರ ಜನಸಂಖ್ಯೆಯನ್ನು ತೋರಿಸಲು ಪಾಕಿಸ್ತಾನದ ಧ್ವಜ ಬಳಸಿದ ‘ಸುವರ್ಣ ನ್ಯೂಸ್‌ ಕನ್ನಡ’!

Date:

ಲೋಕಸಭಾ ಚುನಾವಣೆಯು ನಡೆಯುತ್ತಿರುವ ನಡುವೆಯೇ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ಬಿಡುಗಡೆಗೊಂಡಿದೆ. ಈ ವರದಿಯು ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು. ಚುನಾವಣೆಯ ಹೊತ್ತಲ್ಲೇ ಬಿಡುಗಡೆ ಮಾಡಿರುವ ವರದಿಯು ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ.

ಈ ನಡುವೆ, ಈ ವರದಿಯನ್ನು ಆಧರಿಸಿ ಕೆಲವೊಂದು ಮುಖ್ಯವಾಹಿನಿಯ ದೃಶ್ಯ ಮಾಧ್ಯಮಗಳು ಸರಣಿ ಚರ್ಚಾ ಕಾರ್ಯಕ್ರಮಗಳನ್ನು ನಡೆಸತೊಡಗಿವೆ. ಇಂಥದ್ದೇ ಒಂದು ಚರ್ಚೆಯನ್ನು ಕನ್ನಡದ ಸುದ್ದಿವಾಹಿನಿ ಸುವರ್ಣ ನ್ಯೂಸ್ ಕನ್ನಡ ಕೂಡ ನಿನ್ನೆ(ಮೇ 9, 2024 ಗುರುವಾರ) ಪ್ರಸಾರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 9ರ ರಾತ್ರಿ 8.30ಕ್ಕೆ ಪ್ರಸಾರಗೊಂಡಿರುವ ಈ ಕಾರ್ಯಕ್ರಮವನ್ನು ಸುವರ್ಣ ನ್ಯೂಸ್‌ನ ಅಜಿತ್ ಹನುಮಕ್ಕನವರ್ ನಿರೂಪಿಸುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನ ಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವುದು ಕಂಡುಬಂದಿದೆ.

ಇದರ ವಿಡಿಯೋ ಹಾಗೂ ಸ್ಕ್ರೀನ್‌ಶಾಟ್‌ನ ವಿಡಿಯೋವನ್ನು ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೇರ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಬಳಿಕ ಈ ಬೆಳವಣಿಗೆ ನಡೆದಿರುವುದು ಗೊತ್ತಾಗಿದೆ.

ತಮ್ಮ ಟ್ವೀಟ್‌ನಲ್ಲಿ ಮುಹಮ್ಮದ್ ಝುಬೇರ್ ಅವರು, “ಭಾರತೀಯ ಹಿಂದೂಗಳಿಗೆ ಭಾರತದ ಧ್ವಜ ಮತ್ತು ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನದ ಧ್ವಜ ಬಳಸಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಮತ್ತು ಅದರ ಆ್ಯಂಕರ್ ಅಜಿತ್ ಹನುಮಕ್ಕನವರ್ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯನ್ನು ಚರ್ಚಿಸುವಾಗ 20 ಕೋಟಿ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನದ ಧ್ವಜ ಬಳಸಿ, ಚಿತ್ರಿಸಿದ್ದಾರೆ. ಕರ್ನಾಟಕದ ಸಂಘಟನೆಗಳು ಆ್ಯಂಕರ್ ಮತ್ತು ಚಾನೆಲ್ ವಿರುದ್ಧ ದೂರು ದಾಖಲಿಸುತ್ತವೆ ಎಂದುಕೊಂಡಿದ್ದೇನೆ” ಎಂದಿದ್ದಾರೆ.

ಸಾಧಾರಣವಾಗಿ ಸುದ್ದಿವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲ ಚರ್ಚೆಯ ವೀಡಿಯೊಗಳನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡುವ ಸುವರ್ಣ ನ್ಯೂಸ್ ಕನ್ನಡ, ಈವರೆಗೆ ಯೂಟ್ಯೂಬ್‌ನಲ್ಲಿ ಪ್ರಕಟಿಸಿಲ್ಲ. ಆದರೆ, ಇದರ ವಿಡಿಯೋ ನೇರಪ್ರಸಾರ ಮಾಡಿರುವ ಕೆಲವೊಂದು ಆ್ಯಪ್‌ಗಳಲ್ಲಿ ಇನ್ನೂ ಲಭ್ಯವಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಈ ಬೆಳವಣಿಗೆಯ ಬಗ್ಗೆ ಸುವರ್ಣ ನ್ಯೂಸ್ ಕನ್ನಡ ಚಾನೆಲ್ ವಿರುದ್ಧ ದೂರು ನೀಡಲು ಬೆಂಗಳೂರಿನ ಕೆಲವು ಸಾಮಾಜಿಕ ಕಾರ್ಯಕರ್ತರು ಚಿಂತನೆ ನಡೆಸಿದ್ದು, ಮೇ 11ರಂದು ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಿದ್ದಾರೆ ಎಂದು ಈ ದಿನ.ಕಾಮ್‌ಗೆ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...