ಕೆಇಎ ಪರೀಕ್ಷಾ ಅಕ್ರಮ | ಬಿಜೆಪಿಯವರ ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿ: ಪರಮೇಶ್ವರ್‌ ಕಿಡಿ

Date:

  • ‘ಕಿಂಗ್ ಪಿನ್ ಆರ್ ಡಿ ಪಾಟೀಲ್‌ನನ್ನು ಬಿಡುವ ಪ್ರಶ್ನೆಯೇ ಇಲ್ಲ’
  • ‘ತಪ್ಪಿದ್ದರೆ ಪೊಲೀಸರ ವಿರುದ್ದವೂ ಕ್ರಮ ತೆಗೆದುಕೊಳ್ಳುತ್ತೇವೆ’

ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್ ಡಿ ಪಾಟೀಲ್‌ನನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. ಈ ಬಿಜೆಪಿಯವರಿಗೆ ಕಾಮಾಲೆ ಕಣ್ಣು ಇರುವುದರಿಂದ, ಅವರಿಗೆ ಕಾಣುವುದೆಲ್ಲ ಹಳದಿಯೇ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಿಡಿಕಾರಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಆರ್‌ ಡಿ ಪಾಟೀಲ್ ನಾಪತ್ತೆ ಪ್ರಕರಣದಲ್ಲಿ ಪೊಲೀಸರ ತಪ್ಪಿದ್ದರೆ, ನಾವು ಪೊಲೀಸರ ವಿರುದ್ದವೂ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಇಬ್ಬರು ಪೋಲೀಸರ ವಿರುದ್ದ ಶಿಸ್ತುಕ್ರಮ ಜರುಗಿಸುತ್ತಿದ್ದೇವೆ” ಎಂದು ತಿಳಿಸಿದರು.

“ಆರ್ ಡಿ ಪಾಟೀಲ್‌ನನ್ನು ನಾವು ಬಿಡೋದಿಲ್ಲ. ಬಿಜೆಪಿಯವರು ಸುಮ್ಮನೆ ನಮ್ಮ ಮುಖಂಡ ಪ್ರಿಯಾಂಕ್ ಖರ್ಗೆ ವಿರುದ್ದ ವಿನಾಕಾರಣ ಆರೋಪ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿ ಗಣತಿ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ನೂರಾರು ಕೋಟಿ ಖರ್ಚು ಮಾಡಿ ಜಾತಿಗಣತಿ ಮಾಡಿಸಲಾಗಿದೆ. ಈಗ ವರದಿಯಲ್ಲಿ ಏನು ಇದೆ ಅಂತ ಗೊತ್ತಾಗಬೇಕು. ಒಳ ಮೀಸಲಾತಿ ವಿಚಾರದಲ್ಲಿ ನಾನು ಅದರ ಪರವಾಗಿರುವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

“ಸದಾಶಿವ ಆಯೋಗದ ವರದಿ ವಿಚಾರ ಸಂಬಂಧಿಸಿದಂತೆ ಚಿತ್ರದುರ್ಗದಲ್ಲಿ ನಾವು ಘೋಷಣೆ ಮಾಡಿದ್ದೇವೆ. ನಾವು ಘೋಷಣೆ ಮಾಡಿದಂತೆ ಈಗ ನಡೆದುಕೊಳ್ಳಬೇಕು ಅಲ್ವಾ? ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

“ಬೇರೆ ಪಕ್ಷದ ಶಾಸಕರು ಕಾಂಗ್ರೆಸ್‌ಗೆ ಬರುವ ವಿಚಾರ ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ಇರಬಹುದು. ಹೀಗಾಗಿ ಅವರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿಕೊಂಡರು ಯಾರೇ ಬಂದರೂ ಸ್ವಾಗತ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...